ADVERTISEMENT

ಬ್ಯಾಂಕ್‌ ವಂಚನೆ ₹2.05 ಲಕ್ಷ ಕೋಟಿ

11 ವರ್ಷಗಳಲ್ಲಿ 53,334 ಪ್ರಕರಣ: ರಿಸರ್ವ್‌ ಬ್ಯಾಂಕ್‌

ಪಿಟಿಐ
Published 12 ಜೂನ್ 2019, 17:08 IST
Last Updated 12 ಜೂನ್ 2019, 17:08 IST

ನವದೆಹಲಿ: ಕಳೆದ 11 ಹಣಕಾಸು ವರ್ಷಗಳಲ್ಲಿ ದೇಶಿ ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ₹ 2.05 ಲಕ್ಷ ಕೋಟಿ ಮೌಲ್ಯದ ವಂಚನೆ ನಡೆದಿದೆ.

ಎಸ್‌ಬಿಐ, ಐಸಿಐಸಿಐ ಬ್ಯಾಂಕ್‌ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್‌ಗಳಲ್ಲಿ ಅತಿ ಹೆಚ್ಚಿನ ಪ್ರಕರಣಗಳು ವರದಿಯಾಗಿವೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ ಮಾಹಿತಿ ಹಕ್ಕು ಕಾಯ್ದೆ ಅಡಿ ಕೇಳಿದ ಪ್ರಶ್ನೆಗೆ ಮಾಹಿತಿ ನೀಡಿದೆ.

2008–09 ರಿಂದ 2018–19ರ ಅವಧಿಯಲ್ಲಿ ಒಟ್ಟಾರೆ 53,334 ವಂಚನೆ ಪ್ರಕರಣಗಳು ವರದಿಯಾಗಿವೆ.

ADVERTISEMENT

ವಂಚನೆ ಪ್ರಕರಣಗಳ ನಡೆದ ಬ್ಯಾಂಕ್‌ಗಳ ಪಟ್ಟಿಯಲ್ಲಿ ಸಿಂಡಿಕೇಟ್‌ ಬ್ಯಾಂಕ್‌,ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾ,ಐಡಿಬಿಐ ಬ್ಯಾಂಕ್‌,ಸ್ಟ್ಯಾಂಡರ್ಡ್‌ ಚಾರ್ಟರ್ಡ್‌ ಬ್ಯಾಂಕ್, ಕೆನರಾ ಬ್ಯಾಂಕ್, ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ,ಕೋಟಕ್‌ ಮಹೀಂದ್ರಾ,ಇಂಡಿಯನ್‌ ಓವರ್‌ಸಿಸ್‌ ಬ್ಯಾಂಕ್‌, ಓರಿಯಂಟಲ್‌ ಬ್ಯಾಂಕ್ ಆಫ್‌ ಕಾಮರ್ಸ್‌ ಸಹ ಸೇರಿವೆ. ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವು ವಿದೇಶಿ ಬ್ಯಾಂಕ್‌ಗಳಲ್ಲಿಯೂ ವಂಚನೆಗಳು ನಡೆದಿವೆ ಎಂದು ಆರ್‌ಬಿಐ ವರದಿಯಲ್ಲಿ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.