ನವದೆಹಲಿ (ಪಿಟಿಐ): ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಬರೋಡಾ (ಬಿಒಬಿ) 2023–24ನೇ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ₹4,579 ಕೋಟಿ ನಿವ್ವಳ ಲಾಭ ಗಳಿಸಿದೆ.
2022–23ರ ಮೂರನೇ ತ್ರೈಮಾಸಿಕದಲ್ಲಿ ₹3,853 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಲಾಭದಲ್ಲಿ ಶೇ 19ರಷ್ಟು ಹೆಚ್ಚಳವಾಗಿದೆ ಎಂದು ಷೇರುಪೇಟೆಗೆ ಬ್ಯಾಂಕ್ ತಿಳಿಸಿದೆ.
ಒಟ್ಟು ವರಮಾನವು ₹27,092 ಕೋಟಿಯಿಂದ ₹31,416 ಕೋಟಿಗೆ ಏರಿಕೆಯಾಗಿದೆ. ಬಡ್ಡಿ ವರಮಾನವು ₹23,540 ಕೋಟಿಯಿಂದ ₹28,605 ಕೋಟಿಗೆ ಹೆಚ್ಚಳವಾಗಿದೆ. ವಸೂಲಾಗದ ಸಾಲದ ಸರಾಸರಿ ಪ್ರಮಾಣವು (ಎನ್‌ಪಿಎ) ಶೇ 4.53ರಿಂದ ಶೇ 3.08ಕ್ಕೆ ಕುಗ್ಗಿದೆ. ನಿವ್ವಳ ಎನ್‌ಪಿಎ ಶೇ 0.99ರಿಂದ ಶೇ 0.70ಕ್ಕೆ ಇಳಿಕೆಯಾಗಿದೆ ಎಂದು ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.