ADVERTISEMENT

ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ಬ್ಯಾಂಕ್‌ ಆಫ್‌ ಬರೋಡಾ ಲಾಭ ಶೇ 24ರಷ್ಟು ಹೆಚ್ಚಳ

ಪಿಟಿಐ
Published 10 ನವೆಂಬರ್ 2021, 13:37 IST
Last Updated 10 ನವೆಂಬರ್ 2021, 13:37 IST

ನವದೆಹಲಿ: ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ ಆಫ್‌ ಬರೋಡಾ (ಬಿಒಬಿ) ಪ್ರಸಕ್ತ ಹಣಕಾಸು ವರ್ಷದ ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ₹ 2,088 ಕೋಟಿ ನಿವ್ವಳ ಲಾಭ ಗಳಿಸಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹ 1,679 ಕೋಟಿ ನಿವ್ವಳ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಲಾಭದಲ್ಲಿ ಶೇಕಡ 24 ರಷ್ಟು ಏರಿಕೆ ಆಗಿದೆ.

ಬ್ಯಾಂಕ್‌ನ ಒಟ್ಟು ವರಮಾನವು ₹ 20,729 ಕೋಟಿಯಿಂದ ₹ 20,270 ಕೋಟಿಗೆ ಇಳಿಕೆ ಆಗಿದೆ ಎಂದು ಷೇರುಪೇಟೆಗೆ ಮಾಹಿತಿ ನೀಡಿದೆ. ವಸೂಲಾಗದ ಸಾಲದ ಸರಾಸರಿ ಪ್ರಮಾಣವು (ಜಿಎನ್‌ಪಿಎ) ಶೇ 9.14ರಿಂದ ಶೇ 8.11ಕ್ಕೆ ಇಳಿಕೆ ಆಗಿದೆ. ನಿವ್ವಳ ಎನ್‌ಪಿಎ ಶೇ 2.51ರಿಂದ ಶೇ 2.83ಕ್ಕೆ ಅಲ್ಪ ಹೆಚ್ಚಳ ಕಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT