ADVERTISEMENT

ಫೆ. 24, 25ಕ್ಕೆ ಬ್ಯಾಂಕ್‌ ನೌಕರರ ಪ್ರತಿಭಟನೆ

ಪಿಟಿಐ
Published 9 ಜನವರಿ 2025, 15:53 IST
Last Updated 9 ಜನವರಿ 2025, 15:53 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ವಾರದಲ್ಲಿ ಐದು ದಿನ ಕೆಲಸದ ನಿಯಮ ಜಾರಿಗೊಳಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಫೆಬ್ರುವರಿ 24 ಮತ್ತು 25ರಂದು ದೇಶದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಅಖಿಲ ಭಾರತ ಬ್ಯಾಂಕ್‌ ಅಧಿಕಾರಿಗಳ ಒಕ್ಕೂಟ (ಎಐಬಿಒಸಿ) ಗುರುವಾರ ತಿಳಿಸಿದೆ. 

ಎಲ್ಲ ಕೇಡರ್‌ಗಳಿಗೆ ಸಿಬ್ಬಂದಿ ನೇಮಕ ಮಾಡಬೇಕು. ಹಣಕಾಸು ಸೇವೆಗಳ ಇಲಾಖೆಯು (ಡಿಎಫ್‌ಎಸ್‌) ಬ್ಯಾಂಕ್‌ ಸಿಬ್ಬಂದಿಯ ಕಾರ್ಯವೈಖರಿ ಕುರಿತು ಪರಿಶೀಲಿಸಲು ನಿರ್ದೇಶನ ನೀಡಿದೆ. ಇದರಿಂದ ಸೇವಾ ಭದ್ರತೆಯ ಆತಂಕ ಕಾಡುತ್ತಿದೆ. ಉದ್ಯೋಗಿಗಳನ್ನು ವಿಭಜಿಸುವ ತಂತ್ರ ಇದಾಗಿದೆ. ಕೂಡಲೇ ಈ ಆದೇಶ ವಾಪಸ್‌ ಪಡೆಯಬೇಕು ಎಂದು ಒತ್ತಾಯಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT