ADVERTISEMENT

ಎರಡನೇ ದಿನವೂ ಬ್ಯಾಂಕಿಂಗ್ ಸೇವೆಗೆ ಅಡ್ಡಿ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2021, 14:27 IST
Last Updated 16 ಮಾರ್ಚ್ 2021, 14:27 IST

ಬೆಂಗಳೂರು: ವಿವಿಧ ಬ್ಯಾಂಕ್‌ ಸಂಘಟನೆಗಳ ಮುಷ್ಕರದಿಂದಾಗಿ ರಾಷ್ಟ್ರೀಕೃತ ಬ್ಯಾಂಕ್‌ಗಳ ಶಾಖೆಗಳಲ್ಲಿ ಹಣ ವರ್ಗಾವಣೆ, ಸ್ವೀಕೃತಿ, ಸಾಲ ಮಂಜೂರಾತಿ, ಚೆಕ್‌ ಕ್ಲಿಯರೆನ್ಸ್‌ನಂತಹ ಸೇವೆಗಳಿಗೆ ಮಂಗಳವಾರವೂ ಅಡ್ಡಿ ಉಂಟಾಯಿತು.

‘ಎರಡು ದಿನ ಮಾತ್ರವೇ ಮುಷ್ಕರ ನಡೆಸಲು ನಿರ್ಧರಿಸಲಾಗಿತ್ತು. ಇನ್ನೂ ಕೆಲವು ದಿನ ನೋಡಿ ನಮ್ಮ ಮುಂದಿನ ನಡೆ ಬಗ್ಗೆ ಬ್ಯಾಂಕ್‌ ಸಂಘಟನೆಗಳ ಸಂಯುಕ್ತ ವೇದಿಕೆ (ಯುಎಫ್‌ಬಿಯು) ನಿರ್ಧಾರ ತೆಗೆದುಕೊಳ್ಳಲಿದೆ’ ಎಂದು ಅಖಿಲ ಭಾರತ ಬ್ಯಾಂಕ್‌ ನೌಕರರ ಸಂಘಟನೆಯ (ಐಎನ್‌ಬಿಇಎಫ್) ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ಕೆ. ನರಸಿಂಹಮೂರ್ತಿ ತಿಳಿಸಿದರು.

ಕೇಂದ್ರ ಸರ್ಕಾರಿ ಸ್ವಾಮ್ಯದ ಎರಡು ಬ್ಯಾಂಕ್‌ಗಳ ಖಾಸಗೀಕರಣ ಪ್ರಸ್ತಾವ ವಿರೋಧಿಸಿ ಈ ಮುಷ್ಕರ ನಡೆದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.