ADVERTISEMENT

ಬ್ಯಾಂಕಿಂಗ್‌ ವ್ಯವಸ್ಥೆ ಸದೃಢ; ದಾಸ್‌ ಭರವಸೆ

ಪಿಟಿಐ
Published 4 ಅಕ್ಟೋಬರ್ 2019, 19:31 IST
Last Updated 4 ಅಕ್ಟೋಬರ್ 2019, 19:31 IST
ಬ್ಯಾಂಕಿಂಗ್‌ ವಲಯ
ಬ್ಯಾಂಕಿಂಗ್‌ ವಲಯ    

ಮುಂಬೈ: ‘ಸಹಕಾರಿ ಕ್ಷೇತ್ರವೂ ಸೇರಿದಂತೆ ದೇಶದ ಒಟ್ಟಾರೆ ಬ್ಯಾಂಕಿಂಗ್‌ ವ್ಯವಸ್ಥೆಯು ಸದೃಢವಾಗಿದ್ದು, ಗ್ರಾಹಕರು ಆತಂಕ ಪಡಬೇಕಾಗಿಲ್ಲ’ ಎಂದು ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್ ಭರವಸೆ ನೀಡಿದ್ದಾರೆ.

‘ನಮ್ಮ ಬ್ಯಾಂಕಿಂಗ್‌ ಕ್ಷೇತ್ರವು ಸದೃಢವಾಗಿದೆ. ಆತಂಕ ಪಡುವುದಕ್ಕೆ ಯಾವುದೇ ಕಾರಣಗಳಿಲ್ಲ. ಕೆಲವೊಮ್ಮೆ ಅನಗತ್ಯ ಗಾಳಿಸುದ್ದಿಗಳು ಗ್ರಾಹಕರಲ್ಲಿ ಆತಂಕ ಮೂಡಿಸುತ್ತವೆ. ಜನರು ಅವುಗಳಿಗೆ ಕಿವಿಗೊಡಬಾರದು’ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕರಿಗೆ ಮನವಿ ಮಾಡಿಕೊಂಡಿದ್ದಾರೆ.

ಯಾವುದೇ ಸಹಕಾರಿ ಬ್ಯಾಂಕ್‌ ಬಾಗಿಲು ಮುಚ್ಚಲು ಅವಕಾಶ ನೀಡುವುದಿಲ್ಲ ಎಂದೂ ಹೇಳಿದ್ದಾರೆ. ಪಂಜಾಬ್‌ ಆ್ಯಂಡ್‌ ಮಹಾರಾಷ್ಟ್ರ ಕೋ–ಆಪರೇಟಿವ್‌ (ಪಿಎಂಸಿ) ಬ್ಯಾಂಕ್‌ನಲ್ಲಿ ಉದ್ಭವಿಸಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ದಾಸ್‌ ಈ ಹೇಳಿಕೆ ನೀಡಿದ್ದಾರೆ.

ADVERTISEMENT

‘ಪಿಎಂಸಿ’ಯು ಆರ್‌ಬಿಐನ ಆಡಳಿತಗಾರರ ನಿಯಂತ್ರಣಕ್ಕೆ ಒಳಪಟ್ಟ 24ನೆ ಸಹಕಾರಿ ಬ್ಯಾಂಕ್‌ ಆಗಿದೆ. ಸಹಕಾರಿ ಬ್ಯಾಂಕ್‌ಗಳ ನಿಯಂತ್ರಣ ಮತ್ತು ಆಡಳಿತಾತ್ಮಕ ವಿಷಯಗಳಲ್ಲಿ ಸಾಕಷ್ಟು ಲೋಪದೋಷಗಳಿವೆ. ಅವುಗಳ ಕಾರ್ಯನಿರ್ವಹಣೆಯಲ್ಲಿ ರಾಜಕೀಯ ಹಸ್ತಕ್ಷೇಪವೂ ಹೆಚ್ಚಿದೆ. ಪಟ್ಟಣ ಸಹಕಾರಿ ಬ್ಯಾಂಕ್‌ಗಳ ಬ್ಯಾಂಕಿಂಗ್‌ ಕೆಲಸಗಳನ್ನಷ್ಟೇ ಆರ್‌ಬಿಐ ನಿಯಂತ್ರಿಸುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.