ADVERTISEMENT

ಬ್ಯಾಂಕ್‌ಗಳ ನಷ್ಟ ಮೂರು ಪಟ್ಟು ಹೆಚ್ಚಳ

ವಸೂಲಾಗದ ಸಾಲದ ಸುಳಿ: ಹದಗೆಟ್ಟ ಆರ್ಥಿಕ ಸ್ಥಿತಿ

ಪಿಟಿಐ
Published 18 ನವೆಂಬರ್ 2018, 20:00 IST
Last Updated 18 ನವೆಂಬರ್ 2018, 20:00 IST
   

ನವದೆಹಲಿ: ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ನಷ್ಟದ ಪ್ರಮಾಣವು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ.

ಪ್ರಸಕ್ತ ಹಣಕಾಸು ವರ್ಷದ ಜುಲೈ–ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ (ಎರಡನೇ ತ್ರೈಮಾಸಿಕ) 21 ಬ್ಯಾಂಕ್‌ಗಳ ನಷ್ಟದ ಮೊತ್ತ ₹ 14,716 ಕೋಟಿಯಷ್ಟಾಗಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹ 4,284 ಕೋಟಿ ನಷ್ಟ ಅನುಭವಿಸಿದ್ದವು. ಇದಕ್ಕೆ ಹೋಲಿಸಿದರೆ ನಷ್ಟವು ಮೂರು ಪಟ್ಟು ಹೆಚ್ಚಾಗಿದೆ. ಆದರೆ, ತ್ರೈಮಾಸಿಕದಿಂದ ತ್ರೈಮಾಸಿಕಕ್ಕೆ ಹೋಲಿಕೆ ಮಾಡಿದರೆ, ನಷ್ಟದ ಪ್ರಮಾಣದಲ್ಲಿ ಅಲ್ಪ ಇಳಿಕೆ ಕಂಡುಬಂದಿದೆ. ಏಪ್ರಿಲ್‌–ಜೂನ್‌ ಅವಧಿಯಲ್ಲಿನ ನಷ್ಟ ₹ 16,614 ಕೋಟಿ ಇತ್ತು. ಇದು ಜುಲೈ–ಸೆಪ್ಟೆಂಬರ್‌ ಅವಧಿಗೆ ₹ 14,716 ಕೋಟಿಗೆ ಅಂದರೆ ₹ 2 ಸಾವಿರ ಕೋಟಿಯಷ್ಟು ಕಡಿಮೆಯಾಗಿದೆ.

ಭವಿಷ್ಯದಲ್ಲಿ ಎದುರಾಗಬಹುದಾದ ಆರ್ಥಿಕ ನಷ್ಟ ಭರಿಸಲು ತೆಗೆದಿರಿಸುವ ಮೊತ್ತದಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಇದರಿಂದಾಗಿ ಬ್ಯಾಂಕ್‌ಗಳ ನಷ್ಟದ ಪ್ರಮಾಣವೂ ಹೆಚ್ಚಾಗುತ್ತಿದೆ.‌

ADVERTISEMENT

ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಆರ್ಥಿಕ ಸ್ಥಿತಿ ಸುಧಾರಿಸಲು ಆರ್‌ಬಿಐ ಮತ್ತು ಕೇಂದ್ರ ಸರ್ಕಾರ ಸತತ ಪ್ರಯತ್ನ ನಡೆಸುತ್ತಿವೆ. ಆರ್‌ಬಿಐ ಬ್ಯಾಂಕ್‌ಗಳ ಮೇಲೆ ಕಟ್ಟುನಿಟ್ಟಿನ ನಿಗಾ ಇರಿಸಿದೆ. ಕೇಂದ್ರ ಸರ್ಕಾರ ಬಂಡವಾಳ ನೆರವನ್ನೂ ನೀಡುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.