ಬ್ಯಾಂಕ್
(ಪ್ರಾತಿನಿಧಿಕ ಚಿತ್ರ)
ಮುಂಬೈ: 2023–24ರ ಹಣಕಾಸು ವರ್ಷದಲ್ಲಿ ವಸೂಲಾಗದ ಸಾಲದ ಸರಾಸರಿ ಪ್ರಮಾಣ (ಎನ್‌ಪಿಎ) 13 ವರ್ಷದ ಕನಿಷ್ಠ ಮಟ್ಟಕ್ಕೆ ಇಳಿದು, ಶೇ 2.7ರಷ್ಟಾಗಿದೆ ಎಂದು ಆರ್‌ಬಿಐ ತಿಳಿಸಿದೆ. ಇದು ಸೆಪ್ಟೆಂಬರ್ ಅಂತ್ಯದ ವೇಳೆಗೆ ಶೇ 2.5ರಷ್ಟಾಗಿದೆ.
ದೇಶದ ಒಟ್ಟು ಆಂತರಿಕ ಉತ್ಪನ್ನ (ಜಿಡಿಪಿ), ಹಣದುಬ್ಬರ, ನಿರುದ್ಯೋಗ ದರವು ಸೇರಿ ವಿವಿಧ ಅಂಶಗಳು ದೇಶದ ಬ್ಯಾಂಕ್‌ಗಳು ಮತ್ತು ಬ್ಯಾಂಕಿಂಗೇತರ ಹಣಕಾಸು ಸಂಸ್ಥೆಗಳ ಕಾರ್ಯಕ್ಷಮತೆ ಮತ್ತು ಸದೃಢತೆಯನ್ನು ಹೆಚ್ಚಿಸಿವೆ. ಬ್ಯಾಂಕ್‌ಗಳ ಬಂಡವಾಳ ಸ್ಥಿತಿ ತೃಪ್ತಿಕರವಾಗಿದೆ ಎಂದು ಹೇಳಿದೆ.
ಕಳೆದ ಹಣಕಾಸು ವರ್ಷದಲ್ಲಿ ಶೆಡ್ಯೂಲ್ಡ್ ವಾಣಿಜ್ಯ ಬ್ಯಾಂಕ್‌ಗಳ ನಿವ್ವಳ ಲಾಭವು ಶೇ 32ರಷ್ಟು ಏರಿಕೆಯಾಗಿದ್ದು, ₹3.49 ಲಕ್ಷ ಕೋಟಿಗೆ ಏರಿಕೆಯಾಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.