ADVERTISEMENT

ಆರೋಪ ಕೇಳಿದಿಗಿಲಾಗಿದೆ: ಬಿನ್ನಿ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2018, 17:26 IST
Last Updated 13 ನವೆಂಬರ್ 2018, 17:26 IST

ಬೆಂಗಳೂರು: ‘ನನ್ನ ವಿರುದ್ಧ ಕೇಳಿ ಬಂದಿರುವ ಗಂಭೀರ ಸ್ವರೂಪದ ವೈಯಕ್ತಿಕ ದುರ್ವರ್ತನೆ ಆರೋಪಗಳನ್ನು ಕೇಳಿ ನನಗೆ ದಿಗಿಲಾಗಿದೆ’ ಎಂದು ಫ್ಲಿಪ್‌ಕಾರ್ಟ್‌ ಸಹ ಸ್ಥಾಪಕ ಬಿನ್ನಿ ಬನ್ಸಲ್‌ ಪ್ರತಿಕ್ರಿಯಿಸಿದ್ದಾರೆ.

11 ವರ್ಷಗಳ ಹಿಂದೆ ಸ್ಥಾಪನೆಗೊಂಡಿದ್ದ ಫ್ಲಿಪ್‌ಕಾರ್ಟ್‌ ಸದ್ಯಕ್ಕೆ ವಾಲ್‌ಮಾರ್ಟ್‌ ಒಡೆತನದಲ್ಲಿ ಇದೆ.

‘ಸಂಸ್ಥೆಯ ನಿರ್ದೇಶಕ ಮಂಡಳಿಯಲ್ಲಿ ದೊಡ್ಡ ಪಾಲುದಾರನಾಗಿ ಮುಂದುವರೆಯುವೆ. ನನಗೆ ಮತ್ತು ನನ್ನ ಕುಟುಂಬದ ಪಾಲಿಗೆ ಸವಾಲಿನ ದಿನಗಳು ಎದುರಾಗಿವೆ’ ಎಂದು ಸಂಸ್ಥೆಯ ಸಿಬ್ಬಂದಿಗೆ ಬರೆದ ಇ–ಮೇಲ್‌ನಲ್ಲಿ ಅವರು ತಿಳಿಸಿದ್ದಾರೆ.

ADVERTISEMENT

ತಮ್ಮ ವಿರುದ್ಧದ ಆರೋಪಗಳನ್ನು ಬಿನ್ನಿ ಬಲವಾಗಿ ಅಲ್ಲಗಳೆದಿದ್ದಾರೆ. ಆದರೆ, ಅದರ ವಿವರಗಳು ಗೊತ್ತಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.