ADVERTISEMENT

ಬಿಇಎಲ್‌ ವಹಿವಾಟು ಶೇ 96ರಷ್ಟು ಏರಿಕೆ

​ಪ್ರಜಾವಾಣಿ ವಾರ್ತೆ
Published 16 ಜುಲೈ 2022, 16:47 IST
Last Updated 16 ಜುಲೈ 2022, 16:47 IST

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಭಾರತ್‌ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ (ಬಿಇಎಲ್‌) ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ₹ 3,063 ಕೋಟಿ ಮೊತ್ತದ ವಹಿವಾಟು ನಡೆಸಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಕಂಪನಿಯು ₹ 1,564 ಕೋಟಿ ಮೊತ್ತದ ವಹಿವಾಟು ನಡೆದಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಶೇ 96ರಷ್ಟು ಬೆಳವಣಿಗೆ ಕಂಡಿದೆ ಎಂದು ಕಂಪನಿಯು ಹೇಳಿದೆ.

ತೆರಿಗೆ ನಂತರದ ಲಾಭವು ₹ 11 ಕೋಟಿಯಿಂದ ₹ 431 ಕೋಟಿಗೆ ಏರಿಕೆ ಆಗಿದೆ ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.