ADVERTISEMENT

ಷೇರುಪೇಟೆ ವಹಿವಾಟು ಇಳಿಕೆ

ಪಿಟಿಐ
Published 13 ಸೆಪ್ಟೆಂಬರ್ 2021, 15:41 IST
Last Updated 13 ಸೆಪ್ಟೆಂಬರ್ 2021, 15:41 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ದೇಶದ ಷೇರುಪೇಟೆಗಳು ಸೋಮವಾರದ ವಹಿವಾಟನ್ನು ನಕಾರಾತ್ಮಕವಾಗಿ ಅಂತ್ಯಗೊಳಿಸಿವೆ. ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ ಬಿಡುಗಡೆಯನ್ನು ಜಿಯೊ ಕಂಪನಿಯು ದೀಪಾವಳಿಗೆ ಮುಂದೂಡಿರುವುದರಿಂದ ರಿಲಯನ್ಸ್‌ ಇಂಡಸ್ಟ್ರೀಸ್‌ನ ಷೇರುಗಳು ಮಾರಾಟದ ಒತ್ತಡಕ್ಕೆ ಒಳಗಾದವು. ಇದು ಸೂಚ್ಯಂಕಗಳ ಇಳಿಕೆಗೆ ಕಾರಣವಾಯಿತು ಎಂದು ತಜ್ಞರು ಹೇಳಿದ್ದಾರೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 127 ಅಂಶ ಇಳಿಕೆ ಕಂಡು, 58,177 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 14 ಅಂಶ ಇಳಿಕೆಯಾಗಿ 17,355ಕ್ಕೆ ತಲುಪಿತು.

ರೂಪಾಯಿ ಇಳಿಕೆ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯವು 18 ಪೈಸೆ ಇಳಿಕೆ ಕಂಡಿದ್ದು ಒಂದು ಡಾಲರ್‌ಗೆ ₹ 73.68ರಂತೆ ವಿನಿಮಯಗೊಂಡಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.