ADVERTISEMENT

ಷೇರುಪೇಟೆ: ನಾಲ್ಕನೇ ದಿನವೂ ವಹಿವಾಟು ಇಳಿಕೆ

ಪಿಟಿಐ
Published 17 ಮಾರ್ಚ್ 2021, 15:07 IST
Last Updated 17 ಮಾರ್ಚ್ 2021, 15:07 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್ ಮತ್ತು ಬ್ಯಾಂಕಿಂಗ್‌ ಕಂಪನಿಗಳ ಷೇರುಗಳು ಮಾರಾಟದ ಒತ್ತಡಕ್ಕೆ ಒಳಗಾಗಿದ್ದರಿಂದ ಬುಧವಾರ ಷೇರುಪೇಟೆ ಸೂಚ್ಯಂಕಗಳು ಇಳಿಕೆಯ ಹಾದಿ ಹಿಡಿದವು. ಇದರಿಂದಾಗಿ ಸತತ ನಾಲ್ಕನೇ ದಿನವೂ ನಕಾರಾತ್ಮಕ ವಹಿವಾಟು ನಡೆದಂತಾಗಿದೆ.

ಅಮೆರಿಕದ ಕೇಂದ್ರೀಯ ಬ್ಯಾಂಕ್‌ ಫೆಡರಲ್ ರಿಸರ್ವ್‌ನ ಸಭೆ ಹಾಗೂ ಜಾಗತಿಕ ಮಾರುಕಟ್ಟೆಗಳಲ್ಲಿನ ಇಳಿಮುಖ ವಹಿವಾಟಿನಿಂದಾಗಿ ಸೂಚ್ಯಂಕಗಳು ಇಳಿಕೆ ಕಂಡವು ಎಂದು ತಜ್ಞರು ಹೇಳಿದ್ದಾರೆ. ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 562 ಅಂಶ ಇಳಿಕೆ ಕಂಡು 49,802 ಅಂಶಗಳಿಗೆ ತಲುಪಿತು.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 189 ಅಂಶ ಇಳಿಕೆಯಾಗಿ 14,721 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ADVERTISEMENT

ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಳ, ಅಮೆರಿಕದ ಕೇಂದ್ರ ಬ್ಯಾಂಕ್‌ ಫೆಡರಲ್‌ ರಿಸರ್ವ್‌ನ ಸಭೆ ಹಾಗೂ ಕಚ್ಚಾ ತೈಲ ದರ ಏರಿಕೆಯು ದೇಶಿ ಷೇರುಪೇಟೆಗಳ ಮೇಲೆ ಪರಿಣಾಮ ಬೀರಿತು ಎಂದು ಜಿಯೋಜಿತ್‌ ಫೈನಾನ್ಶಿಯಲ್‌ ಸರ್ವೀಸಸ್‌ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.

ಬಿಎಸ್‌ಇ ಮಿಡ್‌ ಮತ್ತು ಸ್ಮಾಲ್‌ ಕ್ಯಾಪ್‌ ಸೂಚ್ಯಂಕಗಳು ಶೇ 2.28ರವರೆಗೂ ಇಳಿಕೆ ಕಂಡಿವೆ.

₹ 5.55 ಲಕ್ಷ ಕೋಟಿ ನಷ್ಟ: ನಾಲ್ಕು ದಿನಗಳ ವಹಿವಾಟಿನಲ್ಲಿ ಸೆನ್ಸೆಕ್ಸ್‌ 1,477.89 ಅಂಶಗಳಷ್ಟು ಇಳಿಕೆ ಕಂಡಿದ್ದರಿಂದ ಹೂಡಿಕೆದಾರರ ಸಂಪತ್ತಿನ ಮೌಲ್ಯ ₹ 5.55 ಲಕ್ಷ ಕೋಟಿಗಳಷ್ಟು ಕರಗಿದೆ. ಇದರಿಂದಾಗಿ ಷೇರುಪೇಟೆಯ ಬಂಡವಾಳ ಮೌಲ್ಯ ₹ 203.71 ಲಕ್ಷ ಕೋಟಿಗಳಿಗೆ ಇಳಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.