ಬೆಂಗಳೂರು: ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಗೆ ಶನಿವಾರ 44,356 ಚೀಲ ಈರುಳ್ಳಿ ಆವಕವಾಗಿದೆ. ಇದರಲ್ಲಿ ಶೇ 70ರಷ್ಟು ಮಹಾರಾಷ್ಟ್ರದಿಂದ ಪೂರೈಕೆಯಾಗಿದ್ದು, ಉಳಿದ ಶೇ 30ರಷ್ಟು ಕರ್ನಾಟಕದ ಈರುಳ್ಳಿ ಆಗಿದೆ.
ಮಹಾರಾಷ್ಟ್ರದಲ್ಲಿನ ರೈತರು ಈರುಳ್ಳಿಯನ್ನು ಚೆನ್ನಾಗಿ ಒಣಗಿಸಿ, ದಾಸ್ತಾನು ಮಾಡಿ ಮಾರುಕಟ್ಟೆಗೆ ತರುತ್ತಿದ್ದಾರೆ. ಇದರಿಂದ ಉತ್ತಮ ಗುಣಮಟ್ಟದ ಈರುಳ್ಳಿ ಕ್ವಿಂಟಲ್‌ಗೆ ₹1,800ರ ವರೆಗೆ ಇದೆ. ಆದರೆ, ಕರ್ನಾಟಕದಲ್ಲಿ ಬೆಳೆದ ಈರುಳ್ಳಿ ಕ್ವಿಂಟಲ್‌ಗೆ ₹1,500 ದೊರೆಯುತ್ತಿದೆ.
ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಬೆಳೆ ನೆನೆದಿದ್ದು, ಒಣಗಿಸಲು ಆಗುತ್ತಿಲ್ಲ. ಇದರಿಂದ ಈರುಳ್ಳಿ ಗುಣಮಟ್ಟ ಕಡಿಮೆಯಾಗುತ್ತಿದೆ. ಇದೇ ದರ ವ್ಯತ್ಯಾಸಕ್ಕೆ ಕಾರಣ. ರೈತರು ಕೆಲ ದಿನ ತಡವಾದರೂ ಈರುಳ್ಳಿಯನ್ನು ಒಣಗಿಸಿ ಮಾರುಕಟ್ಟೆಗೆ ತಂದರೆ ಉತ್ತಮ ಬೆಲೆ ಸಿಗಲಿದೆ ಎಂದು ಯಶವಂತಪುರ ಮಾರುಕಟ್ಟೆಯ ಈರುಳ್ಳಿ ವರ್ತಕರು ಹೇಳುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.