ADVERTISEMENT

ಕೆಐಎಯಿಂದ 3.75 ಕೋಟಿ ಪ್ರಯಾಣಿಕರ ಸಂಚಾರ

ಪಿಟಿಐ
Published 16 ಏಪ್ರಿಲ್ 2024, 14:54 IST
Last Updated 16 ಏಪ್ರಿಲ್ 2024, 14:54 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ 2023–24ನೇ ಹಣಕಾಸು ವರ್ಷದಲ್ಲಿ 3.75 ಕೋಟಿ ಪ್ರಯಾಣಿಕರು ಸಂಚರಿಸಿದ್ದು, ಹೊಸ ದಾಖಲೆಯಾಗಿದೆ.

ಈ ಪೈಕಿ ದೇಶೀಯವಾಗಿ 3.28 ಕೋಟಿ ಪ್ರಯಾಣಿಕರು ಮತ್ತು 46.7 ಲಕ್ಷ ಅಂತರರಾಷ್ಟ್ರೀಯ ಪ್ರಯಾಣಿಕರಿದ್ದಾರೆ ಎಂದು ವಿಮಾನ ನಿಲ್ದಾಣದ ಪ್ರಾಧಿಕಾರ ತಿಳಿಸಿದೆ.

2023–24ರಲ್ಲಿ 4.39 ಲಕ್ಷ ಟನ್‌ ಸರಕು ಸಾಗಣೆ ಮಾಡಲಾಗಿದೆ. ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ ಸಾಗಣೆಯಲ್ಲಿ ಶೇ 7.1ರಷ್ಟು ಏರಿಕೆಯಾಗಿದೆ ಎಂದು ತಿಳಿಸಿದೆ.

ADVERTISEMENT

ವಿಮಾನ ನಿಲ್ದಾಣದ ಇತಿಹಾಸದಲ್ಲಿ ಇದುವರೆಗೆ ದಾಖಲಾಗಿರುವ ಅತ್ಯಧಿಕ ಪ್ರಯಾಣಿಕರ ಸಂಚಾರ ಇದಾಗಿದೆ ಎಂದು ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿಗಮದ ಮುಖ್ಯ ಆಪರೇಟಿಂಗ್‌ ಅಧಿಕಾರಿ ಸತ್ಯಕಿ ರಘುನಾಥ್ ತಿಳಿಸಿದ್ದಾರೆ.

ಟರ್ಮಿನಲ್‌ ಎರಡರ ಆರಂಭ ಮತ್ತು ಪ್ರಮುಖ ವಿಮಾನಯಾನ ಸಂಸ್ಥೆಗಳು ಹಾಗೂ ಸರಕು ಸಾಗಣೆದಾರರ ಪಾಲುದಾರಿಕೆಯಿಂದಾಗಿ ವಿಮಾನ ನಿಲ್ದಾಣವು ದಕ್ಷಿಣ ಮತ್ತು ಮಧ್ಯ ಭಾರತದ ಹೆಬ್ಬಾಗಿಲಾಗಿದೆ ಎಂದು ಹೇಳಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.