ADVERTISEMENT

ಕೆನರಾ ಬ್ಯಾಂಕ್‌: ಭವೇಂದ್ರ ಕುಮಾರ್‌ ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2023, 16:26 IST
Last Updated 9 ಅಕ್ಟೋಬರ್ 2023, 16:26 IST
ಭವೇಂದ್ರ ಕುಮಾರ್‌
ಭವೇಂದ್ರ ಕುಮಾರ್‌   

ಬೆಂಗಳೂರು: ಕೆನರಾ ಬ್ಯಾಂಕ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಭವೇಂದ್ರ ಕುಮಾರ್‌ ಸೋಮವಾರ ಅಧಿಕಾರ ವಹಿಸಿಕೊಂಡರು.

1997ರಲ್ಲಿ ಕೆನರಾ ಬ್ಯಾಂಕ್‌ನ ಅಧಿಕಾರಿಯಾಗಿ ನೇಮಕವಾದ ಅವರು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. 2018ರಲ್ಲಿ ಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕ, 2022ರಲ್ಲಿ ಮುಖ್ಯ ಪ್ರಧಾನ ವ್ಯವಸ್ಥಾಪಕ ಮತ್ತು ಬ್ಯಾಂಕ್‌ನ ದೆಹಲಿ ವಲಯದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಕೆನರಾ ಬ್ಯಾಂಕ್‌ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT