ADVERTISEMENT

BHEL Income: ಬಿಎಚ್‌ಇಎಲ್‌ ವರಮಾನ ಏರಿಕೆ

ಪಿಟಿಐ
Published 20 ಏಪ್ರಿಲ್ 2025, 14:27 IST
Last Updated 20 ಏಪ್ರಿಲ್ 2025, 14:27 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: 2024–25ನೇ ಆರ್ಥಿಕ ವರ್ಷದಲ್ಲಿ ಸರ್ಕಾರಿ ಸ್ವಾಮ್ಯದ ಭಾರತ್ ಹೆವಿ ಎಲೆಕ್ಟ್ರಿಕಲ್ಸ್‌ ಲಿಮಿಟೆಡ್‌ (ಬಿಎಚ್‌ಇಎಲ್‌) ₹27,350 ಕೋಟಿ ವರಮಾನ ಗಳಿಸಿದೆ. 

2023–24ನೇ ಆರ್ಥಿಕ ವರ್ಷದ ಇದೇ ಅವಧಿಗೆ ಹೋಲಿಸಿದರೆ ವರಮಾನದಲ್ಲಿ ಶೇ 19ರಷ್ಟು ಏರಿಕೆಯಾಗಿದೆ ಎಂದು ಕಂಪನಿಯು ಭಾನುವಾರ ತಿಳಿಸಿದೆ.

ಇದೇ ಅವಧಿಯಲ್ಲಿ ಒಟ್ಟು ₹1.95 ಲಕ್ಷ ಕೋಟಿ ಮೌಲ್ಯದ ಆರ್ಡರ್‌ ಪಡೆಯಲಾಗಿದೆ ಎಂದು ತಿಳಿಸಿದೆ. 

ADVERTISEMENT

ಕಳೆದ ಆರ್ಥಿಕ ವರ್ಷದಲ್ಲಿ ಕಂಪನಿಯ ವರಮಾನ ಹೆಚ್ಚಳವಾಗಿದೆ. ಹೊಸ ಆರ್ಡರ್‌ಗಳ ಸಂಖ್ಯೆಯಲ್ಲೂ ಏರಿಕೆಯಾಗಿದೆ. 2025–26ನೇ ಆರ್ಥಿಕ ವರ್ಷದಲ್ಲೂ ಇದೇ ಬೆಳವಣಿಗೆಯನ್ನು ಕಾಯ್ದುಕೊಳ್ಳಲಾಗುವುದು. ದೇಶೀಯ ಉತ್ಪಾದನೆಗೆ ಒತ್ತು ನೀಡುವ ಜೊತೆಗೆ, ಮಧ್ಯಸ್ಥಗಾರರ ಹಿತಕಾಯಲು ಬದ್ಧ ಎಂದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.