ನವದೆಹಲಿ: 2024–25ನೇ ಆರ್ಥಿಕ ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ಸರ್ಕಾರಿ ಸ್ವಾಮ್ಯದ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (ಬಿಎಚ್‌ಇಎಲ್) ₹504 ಕೋಟಿ ನಿವ್ವಳ ಲಾಭ ಗಳಿಸಿದೆ.
2023–24ನೇ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ₹489 ಕೋಟಿ ಲಾಭ ಗಳಿಸಿತ್ತು. ಈ ಲಾಭಕ್ಕೆ ಹೋಲಿಸಿದರೆ ಶೇ 3ರಷ್ಟು ಏರಿಕೆಯಾಗಿದೆ. ವಹಿವಾಟು ಹೆಚ್ಚಳದಿಂದಾಗಿ ವರಮಾನ ಏರಿಕೆಯಾಗಿದೆ ಎಂದು ಕಂಪನಿಯು ಷೇರುಪೇಟೆಗೆ ಶುಕ್ರವಾರ ತಿಳಿಸಿದೆ.
ಒಟ್ಟು ವರಮಾನ ₹9,142 ಕೋಟಿ ಆಗಿದೆ. ಪ್ರತಿ ಷೇರಿಗೆ 50 ಪೈಸೆ ಲಾಭಾಂಶ ನೀಡಲು ಕಂಪನಿಯ ಮಂಡಳಿಯು ಅನುಮೋದನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.