ನವದೆಹಲಿ: 2022–23ನೇ ಹಣಕಾಸು ವರ್ಷಕ್ಕೆ ಅಂತಿಮ ಲಾಭಾಂಶದ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ₹88 ಕೋಟಿ ಪಾವತಿ ಮಾಡಿರುವುದಾಗಿ ಸರ್ಕಾರಿ ಸ್ವಾಮ್ಯದ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (ಬಿಎಚ್‌ಇಎಲ್) ಗುರುವಾರ ತಿಳಿಸಿದೆ.
ಬಿಎಚ್‌ಇಎಲ್‌ನ ಅಧ್ಯಕ್ಷ ನಳಿನ್ ಸಿಂಘಲ್ ಅವರು ಲಾಭಾಂಶದ ಚೆಕ್ ಅನ್ನು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಸಚಿವ ಮಹೇಂದ್ರನಾಥ್ ಪಾಂಡೆ ಅವರಿಗೆ ನೀಡಿದ್ದಾರೆ ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.