ನವದೆಹಲಿ: ಸರ್ಕಾರಿ ಸ್ವಾಮ್ಯದ ಬಿಎಚ್‌ಇಎಲ್ ಷೇರಿನ ಮೌಲ್ಯದಲ್ಲಿ ಶೇ 9ರಷ್ಟು ಏರಿಕೆಯಾಗಿದ್ದು, ಒಂದೇ ದಿನ ಮಾರುಕಟ್ಟೆ ಮೌಲ್ಯಕ್ಕೆ ₹7,973 ಕೋಟಿ ಸೇರ್ಪಡೆಯಾಗಿದೆ. ಒಟ್ಟು ಎಂ–ಕ್ಯಾಪ್ ₹98,853 ಕೋಟಿಗೆ ತಲುಪಿದೆ.
ಅದಾನಿ ಪವರ್ ಲಿಮಿಟೆಡ್ ಛತ್ತೀಸಗಢದಲ್ಲಿ ಉಷ್ಣ ವಿದ್ಯುತ್ ಯೋಜನೆಯನ್ನು ಕೈಗೆತ್ತಿಕೊಂಡಿದ್ದು, ಬಿಎಚ್‌ಇಎಲ್‌ಗೆ ₹3,500 ಕೋಟಿ ಮೌಲ್ಯದ ಆರ್ಡರ್ ನೀಡಿದೆ. ಹಾಗಾಗಿ, ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ.
ಬಿಎಸ್‌ಇಯಲ್ಲಿ ಷೇರಿನ ಮೌಲ್ಯದಲ್ಲಿ ಶೇ 8.97ರಷ್ಟು ಏರಿಕೆಯಾಗಿದ್ದು, ಪ್ರತಿ ಷೇರಿನ ಬೆಲೆ ₹278.15ಕ್ಕೆ ತಲುಪಿದೆ. ಎನ್‌ಎಸ್‌ಇಯಲ್ಲಿ ಷೇರಿನ ಮೌಲ್ಯದಲ್ಲಿ ಶೇ 9ರಷ್ಟು ಹೆಚ್ಚಳವಾಗಿದ್ದು, ಪ್ರತಿ ಷೇರಿನ ಬೆಲೆ ₹278.50 ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.