ಬೆಂಗಳೂರು: ಜೈವಿಕ ತಂತ್ರಜ್ಞಾನ ಕ್ಷೇತ್ರದ ಪ್ರಮುಖ ಕಂಪನಿ ಬಯೊಕಾನ್, 2019–20ನೇ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ₹ 123 ಕೋಟಿ ನಿವ್ವಳ ಲಾಭ ಗಳಿಸಿದೆ.
ವರ್ಷದ ಹಿಂದಿನ ಇದೇ ಅವಧಿಯಲ್ಲಿನ ₹ 214 ಕೋಟಿ ನಿವ್ವಳ ಲಾಭಕ್ಕೆ ಹೋಲಿಸಿದರೆ ಈ ಬಾರಿ ಶೇ 42ರಷ್ಟು ಕಡಿಮೆಯಾಗಿದೆ. ವರಮಾನವು ಶೇ 6ರಷ್ಟು ಹೆಚ್ಚಾಗಿ ₹ 1,557 ಕೋಟಿಗಳಿಂದ ₹ 1,644 ಕೋಟಿಗೆ ತಲುಪಿದೆ. ವಹಿವಾಟಿನ ಮೇಲೆ ಕೋವಿಡ್ ದಿಗ್ಬಂಧನದ ಪರಿಣಾಮದಿಂದ ಲಾಭ ಕುಸಿದಿದೆ ಎಂದು ಕಂಪನಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.