ADVERTISEMENT

ಅಮೆಜಾನ್‌, ಫ್ಲಿಪ್‌ಕಾರ್ಟ್‌ ಗೋದಾಮು ಮೇಲೆ ಬಿಐಎಸ್ ದಾಳಿ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2025, 15:40 IST
Last Updated 27 ಮಾರ್ಚ್ 2025, 15:40 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ಗೆ ಸೇರಿದ ಗೋದಾಮುಗಳ ಮೇಲೆ ಭಾರತೀಯ ಪ್ರಮಾಣೀಕರಣ ಸಂಸ್ಥೆಯು (ಬಿಐಎಸ್‌) ದಾಳಿ ನಡೆಸಿದೆ. ಗುಣಮಟ್ಟದ ಪ್ರಮಾಣ ಪತ್ರ ಹೊಂದಿಲ್ಲದ ಸಾವಿರಾರು ಉತ್ಪನ್ನಗಳನ್ನು ಜಪ್ತಿ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ತಿಳಿಸಿದೆ.

ಅಮೆಜಾನ್‌ ಕಂಪನಿಗೆ ಸೇರಿದ ಗೋದಾಮಿನ ಮೇಲೆ ದಾಳಿ ನಡೆಸಿದ ಬಿಐಎಸ್‌ ಅಧಿಕಾರಿಗಳು 15 ಗಂಟೆ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಗೀಸರ್, ಮಿಕ್ಸರ್‌ ಸೇರಿ 3,500ಕ್ಕೂ ಹೆಚ್ಚು ಗೃಹೋಪಯೋಗಿ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಇದರ ಅಂದಾಜು ಮೌಲ್ಯ ₹70 ಲಕ್ಷ ಆಗಿದೆ ಎಂದು ತಿಳಿಸಿದೆ.

ಫ್ಲಿಪ್‌ಕಾರ್ಟ್‌ನ ಅಂಗಸಂಸ್ಥೆಯಾದ ಇನ್‌ಸ್ಟಾಕಾರ್ಟ್‌ ಸರ್ವಿಸಸ್‌ ಮೇಲಿನ ದಾಳಿಯಲ್ಲಿ ₹6 ಲಕ್ಷ ಮೌಲ್ಯದ ಪಾದರಕ್ಷೆಗಳನ್ನು ಜಪ್ತಿ ಮಾಡಿದೆ ಎಂದು ಹೇಳಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.