ADVERTISEMENT

ಎಫ್‌ಡಿಐ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2019, 17:21 IST
Last Updated 5 ಸೆಪ್ಟೆಂಬರ್ 2019, 17:21 IST

ನವದೆಹಲಿ (ಪಿಟಿಐ): ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್‌–ಜೂನ್‌ ಅವಧಿಯಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್‌ಡಿಐ) ಶೇ 28ರಷ್ಟು ಹೆಚ್ಚಾಗಿದ್ದು ₹ 1.17 ಲಕ್ಷ ಕೋಟಿಗೆ ತಲುಪಿದೆ.

2018–19ನೇ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹ 1.28 ಲಕ್ಷ ಕೋಟಿ ಎಫ್‌ಡಿಐ ಹರಿದುಬಂದಿತ್ತು ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಮಾಹಿತಿ ನೀಡಿದೆ. ಸೇವೆಗಳು, ಕಂಪ್ಯೂಟರ್‌ ಸಾಫ್ಟ್‌ವೇರ್‌ ಮತ್ತು ಹಾರ್ಡ್‌ವೇರ್‌, ದೂರಸಂಪರ್ಕ ಮತ್ತು ವ್ಯಾಪಾರ ವಲಯಗಳು ಹೆಚ್ಚಿನ ಎಫ್‌ಡಿಐ ಆಕರ್ಷಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT