
ಪಿಟಿಐ
ಜೈಸಲ್ಮೇರ್: ಐಷಾರಾಮಿ ಕಾರು ತಯಾರಕ ಕಂಪನಿ ಬಿಎಂಡಬ್ಲ್ಯು, ಜನವರಿಯಿಂದ ತನ್ನ ವಾಹನಗಳ ಬೆಲೆಯನ್ನು ಹೆಚ್ಚಳ ಮಾಡಲು ನಿರ್ಧರಿಸಿದೆ.
‘ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಯುರೊ ಎದುರು ರೂಪಾಯಿ ಮೌಲ್ಯ ಇಳಿಕೆ ಆಗುತ್ತಿದೆ. ಹೀಗಾಗಿ ದರ ಹೆಚ್ಚಳದ ನಿರ್ಧಾರ ಕೈಗೊಳ್ಳಲಾಗುತ್ತಿದೆ’ ಎಂದು ಕಂಪನಿಯ ಅಧ್ಯಕ್ಷ ಮತ್ತು ಸಿಇಒ ಹರದೀಪ್ ಸಿಂಗ್ ಬಿ. ಹೇಳಿದ್ದಾರೆ.
ರೂಪಾಯಿ ಮೌಲ್ಯದ ಇಳಿಕೆಯು ಕಂಪನಿಯ ಲಾಭದ ಮೇಲೆ ಅಗಾಧ ಒತ್ತಡ ಸೃಷ್ಟಿಸಿದೆ ಎಂದು ಹೇಳಿದ್ದಾರೆ.
ಈಗಾಗಲೇ ಕಂಪನಿಯು ಸೆಪ್ಟೆಂಬರ್ 1ರಿಂದ ಜಾರಿಗೆ ಬರುವಂತೆ ತನ್ನ ವಾಹನದ ಬೆಲೆಯನ್ನು ಶೇ 3ರವರೆಗೆ ಹೆಚ್ಚಳ ಮಾಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.