ನವದೆಹಲಿ: 2024–25ನೇ ಆರ್ಥಿಕ ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಬರೋಡಾ (ಬಿಒಬಿ), ₹4,837 ಕೋಟಿ ನಿವ್ವಳ ಲಾಭ ಗಳಿಸಿದೆ.
ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ₹4,579 ಕೋಟಿ ಲಾಭ ಗಳಿಸಲಾಗಿತ್ತು. ಈ ಲಾಭಕ್ಕೆ ಹೋಲಿಸಿದರೆ ಶೇ 5.6ರಷ್ಟು ಏರಿಕೆಯಾಗಿದೆ ಎಂದು ಬ್ಯಾಂಕ್, ಗುರುವಾರ ಷೇರುಪೇಟೆಗೆ ತಿಳಿಸಿದೆ.
ಕಳೆದ ಆರ್ಥಿಕ ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ಒಟ್ಟು ವರಮಾನವು ₹31,416 ಕೋಟಿ ಸಂಗ್ರಹವಾಗಿತ್ತು. ಈ ಬಾರಿ ₹34,676 ಕೋಟಿಯಾಗಿದೆ. ಬಡ್ಡಿ ವರಮಾನ ₹30,908 ಕೋಟಿ ಆಗಿದೆ.
ವಸೂಲಾಗದ ಸಾಲದ ಸರಾಸರಿ ಪ್ರಮಾಣ ಶೇ 3.08ರಿಂದ ಶೇ 2.43ಕ್ಕೆ ಇಳಿಕೆಯಾಗಿದೆ. ನಿವ್ವಳ ಎನ್‌ಪಿಎ ಶೇ 0.70ಯಿಂದ ಶೇ 0.59ಕ್ಕೆ ಕಡಿಮೆಯಾಗಿದೆ. ಸಮರ್ಪಕ ಬಂಡವಾಳ ಅನುಪಾತವು (ಸಿಎಆರ್) ಶೇ 15.96ರಿಂದ ಶೇ 14.72ಕ್ಕೆ ಇಳಿದಿದೆ ಎಂದು ಬ್ಯಾಂಕ್ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.