ನವದೆಹಲಿ: 2024–25ನೇ ಆರ್ಥಿಕ ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಬರೋಡಾ (ಬಿಒಬಿ), ₹5,048 ಕೋಟಿ ನಿವ್ವಳ ಲಾಭ ಗಳಿಸಿದೆ.
2023–24ನೇ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ₹4,886 ಕೋಟಿ ಲಾಭ ಗಳಿಸಲಾಗಿತ್ತು. ಇದಕ್ಕೆ ಹೋಲಿಸಿದರೆ ಶೇ 3ರಷ್ಟು ಏರಿಕೆಯಾಗಿದೆ ಎಂದು ಬ್ಯಾಂಕ್, ಮಂಗಳವಾರ ಷೇರುಪೇಟೆಗೆ ತಿಳಿಸಿದೆ.
ಬ್ಯಾಂಕ್‌ನ ಒಟ್ಟು ವರಮಾನ ₹35,852 ಕೋಟಿಯಾಗಿದೆ. ಬಡ್ಡಿ ವರಮಾನದಿಂದ ₹30,642 ಕೋಟಿ ಗಳಿಸಿದೆ. ವಸೂಲಾಗದ ಸಾಲದ ಸರಾಸರಿ ಪ್ರಮಾಣ ಶೇ 2.92ರಿಂದ ಶೇ 2.26ಕ್ಕೆ ಇಳಿದಿದೆ. ನಿವ್ವಳ ಎನ್‌ಪಿಎ ಶೇ 0.68ರಿಂದ ಶೇ 0.58ಕ್ಕೆ ತಗ್ಗಿದೆ.
ಬ್ಯಾಂಕ್‌ನ ಸಮರ್ಪಕ ಬಂಡವಾಳ ಅನುಪಾತ ಶೇ 17.19ರಷ್ಟಿದೆ. 2024–25ನೇ ಪೂರ್ಣ ಆರ್ಥಿಕ ವರ್ಷದಲ್ಲಿ ₹19,581 ಕೋಟಿ ಲಾಭ ಗಳಿಸಿದೆ. ಪ್ರತಿ ಈಕ್ವಿಟಿ ಷೇರಿಗೆ ₹8.35 ಲಾಭಾಂಶ ನೀಡಲು ಬ್ಯಾಂಕ್‌ನ ಮಂಡಳಿಯು ಅನುಮೋದನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.