ADVERTISEMENT

ಬಿಪಿಸಿಎಲ್‌ ಲಾಭ ಶೇ 82 ಏರಿಕೆ

ಪಿಟಿಐ
Published 29 ಜನವರಿ 2024, 15:49 IST
Last Updated 29 ಜನವರಿ 2024, 15:49 IST
ಬಿಪಿಸಿಎಲ್‌
ಬಿಪಿಸಿಎಲ್‌   

ನವದೆಹಲಿ: ಸರ್ಕಾರಿ ಸ್ವಾಮ್ಯದ ಭಾರತ್‌ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನ (ಬಿಪಿಸಿಎಲ್) ನಿವ್ವಳ ಲಾಭವು, 2023–24ನೇ ಹಣಕಾಸು ವರ್ಷದ ಡಿಸೆಂಬರ್‌ ತ್ರೈಮಾಸಿಕದಲ್ಲಿ ಶೇ 82ರಷ್ಟು ಏರಿಕೆಯಾಗಿದೆ. 

ಏಪ್ರಿಲ್‌ ತ್ರೈಮಾಸಿಕದಲ್ಲಿ ಕಂಪನಿಯು ₹1,747 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಮೂರನೇ ತ್ರೈಮಾಸಿಕದಲ್ಲಿ 3,181.42 ಕೋಟಿಗೆ ಹೆಚ್ಚಳವಾಗಿದೆ. ಆದರೆ, ಜುಲೈ–ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ₹8,243.55 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಡಿಸೆಂಬರ್ ತ್ರೈಮಾಸಿಕದಲ್ಲಿ ಲಾಭವು ಕಡಿಮೆಯಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾದರೂ 21 ತಿಂಗಳುಗಳಿಂದ ಪೆಟ್ರೋಲ್‌ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆ ಮಾಡಿಲ್ಲ. ಇದು ಲಾಭ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಕಂಪನಿ ತಿಳಿಸಿದೆ.

ADVERTISEMENT

ಪೆಟ್ರೋಲಿಯಂ ಉತ್ಪನ್ನಗಳ ಮಾರಾಟದಿಂದ ಬರುವ ತೆರಿಗೆ ಪೂರ್ವದ ಲಾಭದಲ್ಲೂ ಏರಿಕೆಯಾಗಿದೆ. ಕಳೆದ ವರ್ಷದ ಮೂರನೇ ತ್ರೈಮಾಸಿಕದಲ್ಲಿ ₹2,618.95 ಕೋಟಿ ಆದಾಯ ಗಳಿಸಿತ್ತು. ಈ ಬಾರಿ ₹4,372.93 ಕೋಟಿ ಆದಾಯ ಗಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.