ADVERTISEMENT

ಬಿಎಸ್‌ಎನ್‌ಎಲ್‌: ಪರಿಸರಸ್ನೇಹಿ ಕ್ರಮ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2019, 17:21 IST
Last Updated 8 ಏಪ್ರಿಲ್ 2019, 17:21 IST
   

ಬೆಂಗಳೂರು: ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸೇವಾ ಸಂಸ್ಥೆಯಾಗಿರುವ ಭಾರತ್‌ ಸಂಚಾರ್‌ ನಿಗಮ ನಿಯಮಿತದ (ಬಿಎಸ್‌ಎನ್‌ಎಲ್‌) ಕರ್ನಾಟಕ ವೃತ್ತವು, ಸ್ಥಿರ ದೂರವಾಣಿ ಮತ್ತು ಮೊಬೈಲ್‌ನ ಪೋಸ್ಟ್‌ಪೇಯ್ಡ್‌ ಬಿಲ್‌ ಮತ್ತು ಹಣಪಾವತಿ ವಿವರಗಳನ್ನು ಗ್ರಾಹಕರ ಇ–ಮೇಲ್‌ ಮತ್ತು ಎಸ್‌ಎಂಎಸ್‌ ಮೂಲಕ ಕಳಿಸುವ ಪರಿಸರ ಸ್ನೇಹಿ ಕ್ರಮಕ್ಕೆ ಚಾಲನೆ ನೀಡಿದೆ.

ಗ್ರಾಹಕರು ತಮ್ಮ ಮೊಬೈಲ್ ಸಂಖ್ಯೆ ಮತ್ತು ಇ–ಮೇಲ್‌ ವಿಳಾಸಗಳನ್ನು ಗ್ರಾಹಕ ಸೇವಾ ಕೇಂದ್ರದಲ್ಲಿ ಇಲ್ಲವೆ ಕರೆ ಕೇಂದ್ರದಲ್ಲಿ (1500) ನೋಂದಾಯಿಸಬೇಕು. ಈ ಪರಿಸರ ಸ್ನೇಹಿ ಸೌಲಭ್ಯ ಆಯ್ಕೆ ಮಾಡಿಕೊಂಡವರ ಬಿಲ್‌ನಲ್ಲಿ ₹ 10 ರಿಯಾಯ್ತಿ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT