
ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ದೇಶದ ಉದ್ಯಮ–ವ್ಯಾಪಾರ ಚಟುವಟಿಕೆ ಮಂದಗೊಂಡಿದೆ ಎಂದು ಎನ್‌ಸಿಎಇಆರ್ ಸಮೀಕ್ಷೆ ಸೋಮವಾರ ತಿಳಿಸಿದೆ.
ಅಮೆರಿಕದ ಹೆಚ್ಚುವರಿ ಸುಂಕ ಸೇರಿದಂತೆ ಜಾಗತಿಕ ಅನಿಶ್ಚಿತತೆಗಳು ಚಟುವಟಿಕೆ ಮಂದಗೊಳ್ಳಲು ಕಾರಣ ಎಂದು ರಾಷ್ಟ್ರೀಯ ಆನ್ವಯಿಕ ಆರ್ಥಿಕ ಸಂಶೋಧನಾ ಮಂಡಳಿ (ಎನ್‌ಸಿಎಇಆರ್) ತಿಳಿಸಿದೆ.
ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಜಿಎಸ್‌ಟಿ ದರ ಪರಿಷ್ಕರಣೆ ಆಗಿದೆ. ಇದರ ಪರಿಣಾಮ ಮುಂದಿನ ಎರಡು ತ್ರೈಮಾಸಿಕದಲ್ಲಿ ಕಾಣುವ ನಿರೀಕ್ಷೆ ಇದೆ ಎಂದು ಹೇಳಿದೆ.
ಪ್ರಸಕ್ತ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ವ್ಯಾಪಾರ ಚಟುವಟಿಕೆ ವಿಶ್ವಾಸ ಸೂಚ್ಯಂಕವು (ಬಿಸಿಐ) 149.4ರಷ್ಟಿತ್ತು. ಅದು ದ್ವಿತೀಯ ತ್ರೈಮಾಸಿಕದಲ್ಲಿ 142.6ಕ್ಕೆ ಇಳಿದಿದೆ. ಆದರೆ, ಕಳೆದ ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಸೂಚ್ಯಂಕವು 134.3ರಷ್ಟಿತ್ತು. ಇದಕ್ಕೆ ಹೋಲಿಸಿದರೆ ಪ್ರಸಕ್ತ ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿನ ಸೂಚ್ಯಂಕವು ಏರಿಕೆಯಾಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.