ADVERTISEMENT

ಬ್ಯಾಡಗಿ ಡಬ್ಬಿ ಮೆಣಸಿನಕಾಯಿ ದರ ₹ 32 ಸಾವಿರ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2020, 21:43 IST
Last Updated 9 ಮಾರ್ಚ್ 2020, 21:43 IST
ಸಾಂದರ್ಭಿಕ ಚಿತ್
ಸಾಂದರ್ಭಿಕ ಚಿತ್   

ಬ್ಯಾಡಗಿ: ಸ್ಥಳೀಯ ಮಾರುಕಟ್ಟೆಯಲ್ಲಿ ಬ್ಯಾಡಗಿ ಡಬ್ಬಿ ಮೆಣಸಿನಕಾಯಿ ದರದಲ್ಲಿ ಭಾರಿ ಏರಿಕೆ ಕಂಡಿದ್ದು, ಪ್ರತಿ ಕ್ವಿಂಟಲ್‌ಗೆ ಗರಿಷ್ಠ ₹ 32 ಸಾವಿರಕ್ಕೆ ತಲುಪಿದೆ.

ಸೋಮವಾರ 1,26,903 ಚೀಲ (38,070 ಕ್ವಿಂಟಲ್‌) ಮೆಣಸಿನಕಾಯಿ ಆವಕವಾಗಿದೆ. ಪ್ರಸಕ್ತ ಹಂಗಾಮಿನಲ್ಲಿ ಒಂದೇ ದಿನದಲ್ಲಿ 4ನೇ ಬಾರಿಗೆ ಲಕ್ಷಕ್ಕಿಂತ ಹೆಚ್ಚು ಚೀಲ ಆವಕವಾದಂತಾಗಿದೆ.

‘ಬ್ಯಾಡಗಿ ಕಡ್ಡಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ಸ್ಥಿರತೆ ಕಂಡಿದ್ದು, ಗುಂಟೂರು ತಳಿ ಮೆಣಸಿನಕಾಯಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ಸ್ವಲ್ಪ ಏರಿಕೆಯಾಗಿದೆ. ಕ್ವಿಂಟಲ್‌ಗೆ ₹ 10 ಸಾವಿರ ದರದಲ್ಲಿ ಮಾರಾಟವಾಗುತ್ತಿದ್ದ ಗುಂಟೂರು ತಳಿಗೆ ಬೇಡಿಕೆ ಹೆಚ್ಚಿದ್ದು, ಈಗ ಗರಿಷ್ಠ ₹11,509 ರಂತೆ ಮಾರಾಟವಾಗುತ್ತಿದೆ’ ಎಂದು ಎಪಿಎಂಸಿ ಕಾರ್ಯದರ್ಶಿ ಎಸ್‌.ಎನ್‌.ನ್ಯಾಮಗೌಡ ತಿಳಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.