ADVERTISEMENT

ಡಿಎಪಿ: ಸಬ್ಸಿಡಿ ಮೊತ್ತ ಹೆಚ್ಚಳಕ್ಕೆ ಒಪ್ಪಿಗೆ

ಪಿಟಿಐ
Published 16 ಜೂನ್ 2021, 13:59 IST
Last Updated 16 ಜೂನ್ 2021, 13:59 IST

ನವದೆಹಲಿ: ಡಿಎಪಿ ರಸಗೊಬ್ಬರದ ಮೇಲಿನ ಸಬ್ಸಿಡಿ ಮೊತ್ತವನ್ನು ಹೆಚ್ಚಿಸುವ ನಿರ್ಧಾರಕ್ಕೆ ಕೇಂದ್ರ ಸಚಿವ ಸಂಪುಟವು ಬುಧವಾರ ಒಪ್ಪಿಗೆ ನೀಡಿದೆ. 50 ಕೆ.ಜಿ ತೂಕದ ಒಂದು ಚೀಲಕ್ಕೆ ನೀಡುತ್ತಿದ್ದ ₹ 500 ಸಬ್ಸಿಡಿಯನ್ನು ₹ 1,200ಕ್ಕೆ ಹೆಚ್ಚಿಸಲಾಗಿದೆ. ಇದರಿಂದ ರೈತರು ₹ 1,200ರ ಹಳೆಯ ಬೆಲೆಗೆ ಒಂದು ಚೀಲ ಡಿಎಪಿ ಪಡೆಯಲಿದ್ದಾರೆ.

ಈ ನಿರ್ಧಾರದಿಂದ ಸರ್ಕಾರದ ಬೊಕ್ಕಸಕ್ಕೆ ₹ 14,775 ಕೋಟಿ ಹೆಚ್ಚಿನ ಹೊರೆ ಬೀಳಲಿದೆ. ಡಿಎಪಿ ರಸಗೊಬ್ಬರಕ್ಕೆ ನೀಡುವ ಸಬ್ಸಿಡಿಯ ಪ್ರಮಾಣವನ್ನು ಶೇಕಡ 140ರಷ್ಟು ಹೆಚ್ಚಿಸಲು ಕಳೆದ ತಿಂಗಳು ಕೇಂದ್ರ ಸರ್ಕಾರ ನಿರ್ಧರಿಸಿತ್ತು.

‘ರೈತರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸಬ್ಸಿಡಿ ಮೊತ್ತವನ್ನು ಹೆಚ್ಚಿಸುವುದಕ್ಕೆ ಒಪ್ಪಿಗೆ ನೀಡಲಾಗಿದೆ’ ಎಂದು ಸಚಿವ ಸಂಪುಟ ಸಭೆಯ ಬಳಿಕ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಮನ್ಸುಖ್‌ ಮಾಂಡವಿಯಾ ಅವರು ಸುದ್ದಿಗಾರರಿಗೆ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.