ADVERTISEMENT

ಗೋಧಿಯ ಕನಿಷ್ಠ ಬೆಂಬಲ ಬೆಲೆ ಕ್ವಿಂಟಲ್‌ಗೆ ₹160 ಹೆಚ್ಚಳ

ಪಿಟಿಐ
Published 1 ಅಕ್ಟೋಬರ್ 2025, 14:09 IST
Last Updated 1 ಅಕ್ಟೋಬರ್ 2025, 14:09 IST
<div class="paragraphs"><p>ಗೋಧಿ</p></div>

ಗೋಧಿ

   

Credit: iStock photo

ನವದೆಹಲಿ: ಕೇಂದ್ರ ಸರ್ಕಾರವು ಬುಧವಾರ 2026–27ನೇ ಮಾರುಕಟ್ಟೆ ವರ್ಷಕ್ಕೆ ಗೋಧಿಯ ಕನಿಷ್ಠ ಬೆಂಬಲ ಬೆಲೆಯಲ್ಲಿ (ಎಂಎಸ್‌ಪಿ) ₹160 ಹೆಚ್ಚಿಸಿದೆ. ಇದರೊಂದಿಗೆ ಪ್ರತಿ ಕ್ವಿಂಟಲ್‌ ಗೋಧಿಯ ಎಂಎಸ್‌ಪಿ ದರ ₹2,585 ಆಗಿದೆ. 

ADVERTISEMENT

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕಳೆದ ವರ್ಷ 2025-26ರ ಮಾರುಕಟ್ಟೆ ವರ್ಷಕ್ಕೆ ಗೋಧಿಯ ಕನಿಷ್ಠ ಬೆಂಬಲ ಬೆಲೆಯನ್ನು ಕ್ವಿಂಟಲ್‌ಗೆ ₹2,425ಕ್ಕೆ ನಿಗದಿಪಡಿಸಲಾಗಿತ್ತು. ಗೋಧಿ ಮುಖ್ಯ ಚಳಿಗಾಲದ ಬೆಳೆಯಾಗಿದ್ದು, ಅಕ್ಟೋಬರ್ ಅಂತ್ಯದಿಂದ ಬಿತ್ತನೆ ಪ್ರಾರಂಭವಾಗುತ್ತದೆ ಮತ್ತು ಮಾರ್ಚ್‌ನಿಂದ ಕೊಯ್ಲು ಮಾಡಲಾಗುತ್ತದೆ.

2026-27ರ ಗೋಧಿ ಮಾರುಕಟ್ಟೆ ವರ್ಷ ಏಪ್ರಿಲ್‌ನಿಂದ ಪ್ರಾರಂಭವಾಗುತ್ತದೆ. ಆದಾಗ್ಯೂ, ಹೆಚ್ಚಿನ ಖರೀದಿ ಜೂನ್‌ನಲ್ಲಿಯೇ ಕೊನೆಗೊಳ್ಳುತ್ತದೆ. ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ (ಸಿಎಸಿಪಿ) ಶಿಫಾರಸುಗಳ ಆಧಾರದ ಮೇಲೆ ಕನಿಷ್ಠ ಬೆಂಬಲ ಬೆಲೆಯನ್ನು ನಿರ್ಧರಿಸಲಾಗಿದೆ ಎಂದು ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.