ಬೆಂಗಳೂರು: ಭಾರಿ ಮಳೆಯಿಂದ ಭೂಕುಸಿತ ಸಂಭವಿಸಿ ತೊಂದರೆಗೆ ಸಿಲುಕಿರುವ ಕೇರಳದ ವಯನಾಡ್ ಜಿಲ್ಲೆಯ ಸಂತ್ರಸ್ತರಿಗೆ ನೆರವು ಮತ್ತು ಪುನರ್ವಸತಿ ಸೌಲಭ್ಯ ಕಲ್ಪಿಸಲು ಸರ್ಕಾರಿ ಸ್ವಾಮ್ಯದ ಕೆನರಾ ಬ್ಯಾಂಕ್, ಕೇರಳದ ಮುಖ್ಯಮಂತ್ರಿ ಪರಿಹಾರ ನಿಧಿಗೆ ₹1 ಕೋಟಿ ದೇಣಿಗೆ ನೀಡಿದೆ.
ಬ್ಯಾಂಕ್‌ನ ತಿರುವನಂತಪುರಂ ವಲಯದ ಮುಖ್ಯಸ್ಥ ಹಾಗೂ ಪ್ರಧಾನ ವ್ಯವಸ್ಥಾಪಕ ಪ್ರದೀಪ್ ಕೆ.ಎಸ್. ಅವರು, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಡಿ.ಡಿ ಯನ್ನು ಹಸ್ತಾಂತರಿಸಿದರು.
ಬ್ಯಾಂಕ್‌ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆಯಡಿ (ಸಿಎಸ್‌ಆರ್) ಮುಖ್ಯಮಂತ್ರಿ ಪರಿಹಾರ ನಿಧಿಗೆ ಈ ದೇಣಿಗೆ ನೀಡಲಾಗಿದೆ ಎಂದು ಬ್ಯಾಂಕ್ ತಿಳಿಸಿದೆ.
‘ವಯನಾಡ್ ಘಟನೆಯು ಹೃದಯ ಹಿಂಡುವಂತದ್ದು. ಸಂತ್ರಸ್ತರಿಗೆ ಹೆಚ್ಚಿನ ಸಹಾಯ ಮಾಡಲು ಸಿದ್ಧರಿದ್ದೇವೆ. ನಾಗರಿಕರು ಮತ್ತು ಇತರೆ ಸಂಸ್ಥೆಗಳು ಸಹ ನೆರವು ನೀಡಲು ಮುಂದಾಗಬೇಕು’ ಎಂದು ಕೆನರಾ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಕೆ. ಸತ್ಯನಾರಾಯಣ ರಾಜು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.