ADVERTISEMENT

ಕೆನರಾ ಬ್ಯಾಂಕ್‌ ಅಧಿಕಾರಿಗಳ ಸಂಘದ ಸಭೆ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2025, 0:51 IST
Last Updated 9 ಅಕ್ಟೋಬರ್ 2025, 0:51 IST
ಕೆನರಾ ಬ್ಯಾಂಕ್‌
ಕೆನರಾ ಬ್ಯಾಂಕ್‌   

ಬೆಂಗಳೂರು: ಕೆನರಾ ಬ್ಯಾಂಕ್‌ ಅಧಿಕಾರಿಗಳ ಸಂಘದ ಸದಸ್ಯರ ಸಭೆಯು ಇಲ್ಲಿ ಮಂಗಳವಾರ ನಡೆಯಿತು.

ಸಂಘದ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಕೆ. ರವಿ ಕುಮಾರ್ ಅವರು ಸಭೆಯಲ್ಲಿ ಮಾತನಾಡಿ, ಭವಿಷ್ಯದ ಗುರಿಗಳ ಬಗ್ಗೆ ವಿವರಿಸಿದರು.

ಸಭೆಯನ್ನು ಕೆನರಾ ಬ್ಯಾಂಕ್‌ನ ಕಾರ್ಯನಿರ್ವಾಹಕ ನಿರ್ದೇಶಕ ಭವೇಂದ್ರ ಕುಮಾರ್ ಉದ್ಘಾಟಿಸಿದರು. ಬೆಂಗಳೂರು ವೃತ್ತದ ಮುಖ್ಯಸ್ಥ ಹಾಗೂ ಮುಖ್ಯ ಮಹಾ ಪ್ರಬಂಧಕ ಮಹೇಶ್‌ ಎಂ. ಪೈ ಸಭೆಯನ್ನು ಉದ್ದೇಶಿಸಿ ಮಾತನಾಡಿದರು ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಬೆಂಗಳೂರು, ಮೈಸೂರು, ಮಂಡ್ಯ, ಕೋಲಾರ, ದೇವನಹಳ್ಳಿ ಮತ್ತು ತುಮಕೂರಿನಿಂದ ಬಂದಿದ್ದ ಸರಿಸುಮಾರು 350 ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.