ನವದೆಹಲಿ: ಸರ್ಕಾರಿ ಸ್ವಾಮ್ಯದ ಕೆನರಾ ಬ್ಯಾಂಕ್ ಗುರುವಾರದಿಂದ ಜಾರಿಗೆ ಬರುವಂತೆ ಎಂಸಿಎಲ್‌ಆರ್ ಅನ್ನು ಶೇಕಡ 0.10ರಷ್ಟು ಹೆಚ್ಚಿಸಿದೆ. ಇದರಿಂದಾಗಿ ಒಂದು ವರ್ಷದ ಎಂಸಿಎಲ್‌ಆರ್ ಶೇ 7.40ರಿಂದ 7.50ಕ್ಕೆ ಏರಿಕೆ ಆಗಿದೆ.
ರೆಪೊ ದರಕ್ಕೆ ಜೋಡಣೆ ಆಗಿರುವ ಸಾಲದ ಬಡ್ಡಿಯು ಶೇ 7.30ರಿಂದ ಶೇ 7.80ಕ್ಕೆ ಏರಿಕೆ ಆಗಿದೆ. ಈ ಬದಲಾವಣೆಯೂ ಗುರುವಾರದಿಂದ ಜಾರಿಗೆ ಬರಲಿದೆ ಎಂದು ಬ್ಯಾಂಕ್ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.