ADVERTISEMENT

ಕೆನರಾ ಬ್ಯಾಂಕ್‌ ನಿವ್ವಳ ಲಾಭ ₹ 739 ಕೋಟಿ

ಪಿಟಿಐ
Published 27 ಜನವರಿ 2021, 16:37 IST
Last Updated 27 ಜನವರಿ 2021, 16:37 IST

ನವದೆಹಲಿ: ಸರ್ಕಾರಿ ಸ್ವಾಮ್ಯದ ಕೆನರಾ ಬ್ಯಾಂಕ್‌, ಡಿಸೆಂಬರ್‌ ತ್ರೈಮಾಸಿಕದಲ್ಲಿ ₹ 739 ಕೋಟಿ ನಿವ್ವಳ ಲಾಭ ಗಳಿಸಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹ 406 ಕೋಟಿ ನಿವ್ವಳ ಲಾಭ ಗಳಿಸಿತ್ತು.

‘ಆರ್ಥಿಕ ಸಾಧನೆಯನ್ನು ಮೂರನೇ ತ್ರೈಮಾಸಿಕದೊಂದಿಗೆ ಹೋಲಿಕೆ ಮಾಡಲು ಆಗುವುದಿಲ್ಲ. ಏಕೆಂದರೆ ಡಿಸೆಂಬರ್‌ ತ್ರೈಮಾಸಿಕದ ಫಲಿತಾಂಶವು ಸಿಂಡಿಕೇಟ್‌ ಬ್ಯಾಂಕ್‌ನಲ್ಲಿ ವಿಲೀನ ಆದ ನಂತರದ್ದಾಗಿದೆ’ ಎಂದು ತಿಳಿಸಿದೆ. ವಿಲೀನವು ಏಪ್ರಿಲ್‌ 1ರಿಂದ ಜಾರಿಗೆ ಬಂದಿದೆ.

ಬ್ಯಾಂಕ್‌ನ ಒಟ್ಟಾರೆ ವರಮಾನ ₹ 15,532 ಕೋಟಿಗಳಿಂದ ₹ 24,490.63 ಕೋಟಿಗಳಿಗೆ ಏರಿಕೆಯಾಗಿದೆ ಎಂದು ಬ್ಯಾಂಕ್‌, ಷೇರುಪೇಟೆಗೆ ಮಾಹಿತಿ ನೀಡಿದೆ.

ADVERTISEMENT

ವಸೂಲಾಗದ ಸಾಲದ (ಎನ್‌ಪಿಎ) ಸರಾಸರಿ ಪ್ರಮಾಣ ಶೇ 8.40ರಿಂದ ಶೇ 7.48ಕ್ಕೆ ಇಳಿಕೆಯಾಗಿದೆ. ನಿವ್ವಳ ಎನ್‌ಪಿಎ ಶೇ 5.05ರಿಂದ ಶೇ 2.65ಕ್ಕೆ ಇಳಿಕೆಯಾಗಿದೆ.

ಮೂರನೇ ತ್ರೈಮಾಸಿಕದಲ್ಲಿ ನಿವ್ವಳ ಲಾಭ ₹ 329 ಕೋಟಿ ಆಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.