
ಕೋಲ್ಕತ್ತ: ಪ್ರಸಕ್ತ ಆರ್ಥಿಕ ವರ್ಷದಲ್ಲಿ ರಾಜ್ಯಗಳ ಬಂಡವಾಳ ವೆಚ್ಚವು ಶೇ 4ರಿಂದ ಶೇ 6ಕ್ಕೆ ಹೆಚ್ಚಳವಾಗುವ ನಿರೀಕ್ಷೆ ಇದೆ ಎಂದು ಕ್ರಿಸಿಲ್ ರೇಟಿಂಗ್ಸ್ ಹೇಳಿದೆ.
ಹಿಂದಿನ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ಬಂಡವಾಳ ವೆಚ್ಚವು ಶೇ 7ರಷ್ಟಿತ್ತು. ಅದಕ್ಕೆ ಹೋಲಿಸಿದರೆ ಈ ಬಾರಿಯ ಬಂಡವಾಳ ವೆಚ್ಚ ಕಡಿಮೆ ಎಂದು ಹೇಳಿದೆ.
ವಸತಿ, ನಗರಾಭಿವೃದ್ಧಿ ಮತ್ತು ನೀರಾವರಿ ಸೇರಿದಂತೆ ನೀರು ಸರಬರಾಜು ಮತ್ತು ನೈರ್ಮಲ್ಯವು ಕೂಡ ಬಂಡವಾಳ ವೆಚ್ಚ ಹೆಚ್ಚಳಕ್ಕೆ ಕಾರಣವಾಗಿವೆ. ರಾಜ್ಯಗಳ ಬಂಡವಾಳ ವೆಚ್ಚದ ಶೇ 94ರಷ್ಟು ಪಾಲನ್ನು ಅಗ್ರ 18 ರಾಜ್ಯಗಳು ಹೊಂದಿವೆ.
ಜಿಎಸ್‌ಟಿ ದರ ಪರಿಷ್ಕರಣೆಯ ಬಳಿಕ ವರಮಾನ ಸಂಗ್ರಹವು ಮಂದಗೊಂಡಿರುವುದರಿಂದ ರಾಜ್ಯಗಳ ವರಮಾನ ಕೊರತೆ ಹೆಚ್ಚುತ್ತಿದೆ. ಕೇಂದ್ರದಿಂದ ಅನುದಾನ ಹಂಚಿಕೆಯು ನಿಧಾನವಾಗಿದೆ. ಮತ್ತೊಂದೆಡೆ, ವಿವಿಧ ಯೋಜನೆಗಳಿಗೆ ಮೀಸಲಿಟ್ಟ ಮೊತ್ತ ಹಾಗೂ ಸಾಮಾಜಿಕ ಕಲ್ಯಾಣ ಯೋಜನೆಗಳಿಗೆ ಹೆಚ್ಚಿದ ಅನುದಾನದ ಹಂಚಿಕೆಯಿಂದಾಗಿ ವೆಚ್ಚವು ಶೇ 7ರಿಂದ ಶೇ 9ಕ್ಕೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.