ADVERTISEMENT

ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ಗೆ ₹ 750.ಕೋಟಿ ವಂಚನೆ: ಸಿಬಿಐ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2022, 5:58 IST
Last Updated 17 ನವೆಂಬರ್ 2022, 5:58 IST
   

ನವದೆಹಲಿ (ಪಿಟಿಐ): ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ಗೆ ಸಂಬಂಧಿಸಿ ₹750.54 ಕೋಟಿ ವಂಚನೆ ಆರೋಪದ ಮೇಲೆ ಕಾನ್ಪುರ ಮೂಲದ ರೊಟೊಮ್ಯಾಕ್ ಗ್ಲೋಬಲ್ ಕಂಪನಿ ಮತ್ತು ಅದರ ನಿರ್ದೇಶಕರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಕಂಪನಿ ಮತ್ತು ಅದರ ನಿರ್ದೇಶಕರಾದ ಸಾಧನಾ ಕೊಠಾರಿ ಮತ್ತು ರಾಹುಲ್ ಕೊಠಾರಿ ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಲೇಖನ ಸಾಮಗ್ರಿಗಳ ವ್ಯವಹಾರದಲ್ಲಿ ತೊಡಗಿರುವ ಕಂಪನಿಯು ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ ಏಳು ಬ್ಯಾಂಕ್‌ಗಳ ಒಕ್ಕೂಟಕ್ಕೆ ₹2,919 ಕೋಟಿ ರೂಪಾಯಿ ಬಾಕಿ ಇರಿಸಿಕೊಂಡಿದೆ. ಇದರಲ್ಲಿ ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನದ್ದು ಶೇ 23 ರಷ್ಟು ಇದೆ.

ADVERTISEMENT

ಒಕ್ಕೂಟದ ಸದಸ್ಯ ಬ್ಯಾಂಕ್‌ಗಳ ದೂರುಗಳ ಆಧಾರದ ಮೇಲೆ ಕಂಪನಿಯು ಈಗಾಗಲೇ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಿಂದ ತನಿಖೆಗಳನ್ನು ಎದುರಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.