ADVERTISEMENT

ಹಣದುಬ್ಬರ ಇಳಿಕೆ: ಸುಬ್ರಮಣಿಯನ್ ವಿಶ್ವಾಸ

ಪಿಟಿಐ
Published 13 ಸೆಪ್ಟೆಂಬರ್ 2020, 10:41 IST
Last Updated 13 ಸೆಪ್ಟೆಂಬರ್ 2020, 10:41 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ:ಚಿಲ್ಲರೆ ಹಣದುಬ್ಬರ ದರದಲ್ಲಿ ಆದ ಹೆಚ್ಚಳಕ್ಕೆ ಅಗತ್ಯ ವಸ್ತುಗಳ ಪೂರೈಕೆ ವ್ಯವಸ್ಥೆಯಲ್ಲಿ ಕಂಡುಬಂದ ಸಮಸ್ಯೆಗಳೇ ಕಾರಣ ಎಂದು ಹೇಳಿರುವ ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ಕೆ.ವಿ. ಸುಬ್ರಮಣಿಯನ್, ‘ಲಾಕ್‌ಡೌನ್‌ ಸಡಿಲವಾಗಿರುವ ಪರಿಣಾಮವಾಗಿ ಮುಂದಿನ ದಿನಗಳಲ್ಲಿ ಹಣದುಬ್ಬರ ದರವು ಕಡಿಮೆ ಆಗಲಿದೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸರ್ಕಾರ ನೀಡಿದ ಅಂಕಿ–ಅಂಶಗಳ ಅನುಸಾರ, ಜುಲೈ ತಿಂಗಳಿನಲ್ಲಿ ಚಿಲ್ಲರೆ ಹಣದುಬ್ಬರ ದರವು ಶೇಕಡ 6.93ರಷ್ಟು ಇತ್ತು. ತರಕಾರಿ, ಧಾನ್ಯಗಳು, ಮೀನು ಮತ್ತು ಮಾಂಸದಂತಹ ಆಹಾರ ವಸ್ತುಗಳ ಬೆಲೆ ಹೆಚ್ಚಳವಾಗಿದ್ದು ಹಣದುಬ್ಬರ ದರ ಹೆಚ್ಚಳವಾಗಿದ್ದಕ್ಕೆ ಮುಖ್ಯ ಕಾರಣ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜುಲೈ ತಿಂಗಳಲ್ಲಿ ಸಗಟು ಹಣದುಬ್ಬರ ದರವು ಶೇಕಡ 0.58ರಷ್ಟು ಇಳಿಕೆ ಕಂಡಿತ್ತು.

ಚಿಲ್ಲರೆ ಹಣದುಬ್ಬರ ದರವು ವರ್ಷದುದ್ದಕ್ಕೂ ಹೆಚ್ಚಿನ ಮಟ್ಟದಲ್ಲೇ ಇರಲಿದ್ದು, ರೆಪೊ ದರವನ್ನು ತಗ್ಗಿಸಲು ಭಾರತೀಯ ರಿಸರ್ವ್‌ ಬ್ಯಾಂಕ್‌ಗೆ (ಆರ್‌ಬಿಐ) ಅವಕಾಶ ಸಿಗಲಿಕ್ಕಿಲ್ಲ ಎಂಬ ಆತಂಕವೂ ವ್ಯಕ್ತವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.