ADVERTISEMENT

ಕೇಂದ್ರ ಜಿಎಸ್‌ಟಿ ದರ ಅಧಿಸೂಚನೆ ಪ್ರಕಟ

ಪಿಟಿಐ
Published 17 ಸೆಪ್ಟೆಂಬರ್ 2025, 19:01 IST
Last Updated 17 ಸೆಪ್ಟೆಂಬರ್ 2025, 19:01 IST
<div class="paragraphs"><p>ನಿರ್ಮಲಾ ಸೀತಾರಾಮನ್</p></div>

ನಿರ್ಮಲಾ ಸೀತಾರಾಮನ್

   

–ಪಿಟಿಐ ಚಿತ್ರ

ನವದೆಹಲಿ: ಸೆಪ್ಟೆಂಬರ್‌ 22ರಿಂದ ಅನ್ವಯ ಆಗುವ ಪರಿಷ್ಕೃತ ಕೇಂದ್ರ ಜಿಎಸ್‌ಟಿ (ಸಿಜಿಎಸ್‌ಟಿ) ದರವನ್ನು ಕೇಂದ್ರ ಹಣಕಾಸು ಸಚಿವಾಲಯವು ಅಧಿಸೂಚನೆಯಲ್ಲಿ ಪ್ರಕಟಿಸಿದೆ.

ADVERTISEMENT

ಈಗ ರಾಜ್ಯಗಳು ಇದನ್ನು ಅನುಕರಿಸಬೇಕಿದ್ದು, ರಾಜ್ಯ ಜಿಎಸ್‌ಟಿ (ಎಸ್‌ಜಿಎಸ್‌ಟಿ) ದರವನ್ನು ಅವು ಅಧಿಸೂಚನೆಯಲ್ಲಿ ಪ್ರಕಟಿಸಬೇಕಿದೆ.

ಈಗ ಜಿಎಸ್‌ಟಿ ವ್ಯವಸ್ಥೆಯ ಅಡಿಯಲ್ಲಿ ನಾಲ್ಕು ಹಂತಗಳಲ್ಲಿ ತೆರಿಗೆ ವಿಧಿಸಲಾಗುತ್ತಿದೆ. ಸೋಮವಾರದಿಂದ (ಸೆ. 22) ಎರಡು ಹಂತಗಳಲ್ಲಿ ತೆರಿಗೆ ವಿಧಿಸಲಾಗುತ್ತದೆ. ಇದರ ಜೊತೆಗೆ ತಂಬಾಕು ಹಾಗೂ ಐಷಾರಾಮಿ ಉತ್ಪನ್ನಗಳಿಗೆ ಶೇ 40ರಷ್ಟು ತೆರಿಗೆ ಇರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.