ADVERTISEMENT

25,009 ನಕಲಿ ಕಂಪನಿ ಪತ್ತೆ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2025, 15:23 IST
Last Updated 21 ಏಪ್ರಿಲ್ 2025, 15:23 IST
   

ನವದೆಹಲಿ: 2024–25ರ ಆರ್ಥಿಕ ವರ್ಷದಲ್ಲಿ ಕೇಂದ್ರ ಮತ್ತು ರಾಜ್ಯ ಜಿಎಸ್‌ಟಿ ಅಧಿಕಾರಿಗಳು ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ (ಐಟಿಸಿ) ವಂಚನೆ ಪ್ರಕರಣದಲ್ಲಿ ಭಾಗಿಯಾಗಿರುವ 25,009 ನಕಲಿ ಕಂಪನಿಗಳನ್ನು ಪತ್ತೆ ಹಚ್ಚಿದ್ದಾರೆ. ವಂಚನೆಯ ಮೊತ್ತ ₹61,545 ಕೋಟಿಯಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಈ ಪೈಕಿ ₹1,924 ಕೋಟಿ ಮಾತ್ರ ಪಾವತಿಯಾಗಿದ್ದು, 168 ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

2023–24 ಮತ್ತು 2024–25ರ ಆರ್ಥಿಕ ವರ್ಷದಲ್ಲಿ 42,140 ನಕಲಿ ಕಂಪನಿಗಳನ್ನು ಪತ್ತೆ ಹಚ್ಚಲಾಗಿತ್ತು. ಈ ಕಂಪನಿಗಳು ನಕಲಿ ಇನ್‌ವಾಯ್ಸ್‌ ಸೃಷ್ಟಿಸಿ ₹1.01 ಲಕ್ಷ ಕೋಟಿಗೂ ಹೆಚ್ಚು ವಂಚನೆ ಮಾಡಿವೆ. ಈ ಪೈಕಿ ₹3,107 ಕೋಟಿ ವಶಪಡಿಸಿಕೊಳ್ಳಲಾಗಿದ್ದು, 316 ಜನರನ್ನು ಬಂಧಿಸಲಾಗಿತ್ತು. 

ADVERTISEMENT

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮತ್ತು ಜಿಎಸ್‌ಟಿಎನ್ ನಕಲಿ ಐಟಿಸಿ ತಡೆಗಟ್ಟಲು ವಿವಿಧ ಕ್ರಮಗಳನ್ನು ತೆಗೆದುಕೊಂಡಿವೆ ಎಂದು ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.