
ನವದೆಹಲಿ: ಕರ್ನಾಟಕದಲ್ಲಿನ ಸಹಕಾರ ಸಂಘಗಳ ಅಭಿವೃದ್ಧಿಗೆ ₹4,164 ಕೋಟಿ ನೀಡಲಾಗಿದೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ರಾಜ್ಯಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ನವೆಂಬರ್ 25ರವರೆಗೆ ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮವು (ಎನ್‌ಸಿಡಿಸಿ) ದೇಶದಲ್ಲಿನ ಸಹಕಾರ ಸಂಸ್ಥೆಗಳ ಅಭಿವೃದ್ಧಿಗೆ ₹4.67 ಲಕ್ಷ ಕೋಟಿ ಮಂಜೂರು ಮಾಡಿದೆ. ಈ ಪೈಕಿ ಕರ್ನಾಟಕದಲ್ಲಿನ ಸಹಕಾರ ಸಂಘಗಳ ಅಭಿವೃದ್ಧಿಗೆ ₹4,164 ಕೋಟಿ ನೀಡಲಾಗಿದೆ ಎಂದು ಬುಧವಾರ ತಿಳಿಸಿದ್ದಾರೆ.
ರಾಷ್ಟ್ರೀಯ ಸಹಕಾರ ದತ್ತಾಂಶದ ಪ್ರಕಾರ, ಕರ್ನಾಟಕದಲ್ಲಿ 46,798 ಸಹಕಾರ ಸಂಘಗಳು ಇದ್ದು, ಅವು ಒಟ್ಟು 2.38 ಕೋಟಿ ಸದಸ್ಯರನ್ನು ಹೊಂದಿವೆ.
2021ರಲ್ಲಿ ಕೇಂದ್ರ ಸಹಕಾರ ಸಚಿವಾಲಯ ಆರಂಭವಾಯಿತು. ಅಂದಿನಿಂದ ‘ಸಹಕಾರದಿಂದ ಸಮೃದ್ಧಿ’ ಗುರಿ ಸಾಧಿಸಲು ಮತ್ತು ಕರ್ನಾಟಕ ಸೇರಿದಂತೆ ದೇಶದ ಎಲ್ಲೆಡೆ ಹೈನುಗಾರಿಕೆ, ಸಕ್ಕರೆ ಮತ್ತು ಕೃಷಿ ಸಹಕಾರ ಸಂಘಗಳ ಬಲವರ್ಧನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.