ADVERTISEMENT

ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 2ರಷ್ಟು ಹೆಚ್ಚಳ

ಪಿಟಿಐ
Published 28 ಮಾರ್ಚ್ 2025, 11:40 IST
Last Updated 28 ಮಾರ್ಚ್ 2025, 11:40 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ 2ರಷ್ಟು ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. 

ಇದೇ ವರ್ಷದ (2025ರ) ಜ.1ರಿಂದ ಅನ್ವಯವಾಗಲಿದೆ. ತುಟ್ಟಿ ಭತ್ಯೆ ಹೆಚ್ಚಳದಿಂದ ಸುಮಾರು 1.15 ಕೋಟಿ ಕೇಂದ್ರ ಸರ್ಕಾರಿ ನೌಕರರಿಗೆ ಮತ್ತು ಪಿಂಚಣಿದಾರರಿಗೆ ಅನುಕೂಲವಾಗಲಿದೆ. ಶೇ 53ರಷ್ಟಿದ್ದ ತುಟ್ಟಿ ಭತ್ಯೆ ಶೇ 55ಕ್ಕೆ ಏರಿಕೆಯಾಗಲಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್‌ ಸಂಪುಟ ಸಭೆಯಲ್ಲಿ ತಿಳಿಸಿದ್ದಾರೆ

ADVERTISEMENT

ತುಟ್ಟಿ ಭತ್ಯೆ ಹೆಚ್ಚಳದಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕವಾಗಿ ₹6,614.04 ಕೋಟಿ ವೆಚ್ಚ ತಗುಲಲಿದೆ. ಒಟ್ಟಾರೆ ಈ ನಿರ್ಧಾರದಿಂದ 48.66 ಲಕ್ಷ ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಹಾಗೂ 66.55 ಪಿಂಚಣಿದಾರರಿಗೆ ನೆರವಾಗಲಿದೆ ಎಂದು ಹೇಳಿದ್ದಾರೆ.

7ನೇ ವೇತನ ಆಯೋಗದ ಶಿಫಾರಸಿನಲ್ಲಿ ಉಲ್ಲೇಖಿಸಿರುವ ಸೂತ್ರವನ್ನು ಆಧರಿಸಿ ತುಟ್ಟಿ ಭತ್ಯೆ ಹೆಚ್ಚಳಗೊಂಡಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.