ADVERTISEMENT

ಪಿಎಂ-ಕಿಸಾನ್‌ ₹ 50,850 ಕೋಟಿ ವಿತರಣೆ

ಪಿಟಿಐ
Published 22 ಫೆಬ್ರುವರಿ 2020, 22:55 IST
Last Updated 22 ಫೆಬ್ರುವರಿ 2020, 22:55 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್ ನಿಧಿ (ಪಿಎಂ–ಕಿಸಾನ್‌) ಯೋಜನೆಯಲ್ಲಿ ಫಲಾನುಭವಿಗಳಿಗೆ ₹ 50,850 ಕೋಟಿ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಒಟ್ಟಾರೆ 14 ಕೋಟಿ ಫಲಾನುಭವಿಗಳಿಗೆ ಇದರ ಪ್ರಯೋಜನ ಸಿಗಲಿದ್ದು, ಫೆಬ್ರುವರಿ 20ರವರೆಗೆ 8.46 ಕೋಟಿ ರೈತ ಕುಟುಂಬಗಳಿಗೆ ಹಣ ವಿತರಿಸಲಾಗಿದೆ ಎಂದು ತಿಳಿಸಿದೆ.

ವಾರ್ಷಿಕ ₹ 6 ಸಾವಿರ ಮೊತ್ತವು ರೈತರ ಖಾತೆಗೆ ನೇರವಾಗಿ ವರ್ಗಾವಣೆ ಆಗಲಿದೆ. ಇದಕ್ಕೆ,ಆಧಾರ್‌ ಸಂಖ್ಯೆ ಜೋಡಣೆಯಾಗಿರುವ ಬ್ಯಾಂಕ್‌ ಖಾತೆ ಹೊಂದಿರುವುದು ಕಡ್ಡಾಯವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.