ADVERTISEMENT

ಆಹಾರ ಪದಾರ್ಥಗಳ ಬೆಲೆ ನಿಯಂತ್ರಣಕ್ಕೆ ಕ್ರಮ: ಪೀಯೂಷ್‌ ಗೋಯಲ್‌

ಪಿಟಿಐ
Published 9 ಮಾರ್ಚ್ 2024, 15:35 IST
Last Updated 9 ಮಾರ್ಚ್ 2024, 15:35 IST
<div class="paragraphs"><p>ಸಚಿವ ಪೀಯೂಷ್‌ ಗೋಯಲ್‌</p></div>

ಸಚಿವ ಪೀಯೂಷ್‌ ಗೋಯಲ್‌

   

ನವದೆಹಲಿ: ‘ದೇಶದಲ್ಲಿ ಈರುಳ್ಳಿ, ಟೊಮೆಟೊ, ಬೇಳೆಕಾಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮಕೈಗೊಂಡಿದೆ’ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಪೀಯೂಷ್‌ ಗೋಯಲ್‌ ಹೇಳಿದ್ದಾರೆ.

‘ಲೋಕಸಭೆಗೆ ಶೀಘ್ರವೇ ಚುನಾವಣೆ ನಡೆಯಲಿದೆ. ಈ ಹೊತ್ತಿನಲ್ಲಿ ಆಹಾರ ಪದಾರ್ಥಗಳ ಬೆಲೆಗಳನ್ನು ನಿಯಂತ್ರಿಸಲು ಕ್ರಮವಹಿಸಲಾಗಿದೆ. ಯಾವುದೇ ಪದಾರ್ಥದ ಬೆಲೆಯು ತಾತ್ಕಾಲಿಕವಾಗಿ ಏರಿಕೆಯಾದ ವೇಳೆ ಕೇಂದ್ರ ಸರ್ಕಾರವು ಕೆಲವೇ ದಿನಗಳಲ್ಲಿ ನಿಯಂತ್ರಿಸಿರುವ ಹಲವು ನಿದರ್ಶನಗಳಿವೆ’ ಎಂದು ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಅವರು ತಿಳಿಸಿದ್ದಾರೆ.

ADVERTISEMENT

ದೇಶದ ಮಹಿಳೆಯರ ಹಿತಕಾಯಲು ಸರ್ಕಾರ ಬದ್ಧವಾಗಿದೆ. ಆಹಾರದ ಹಣದುಬ್ಬರ ನಿಯಂತ್ರಣಕ್ಕೂ ಕ್ರಮವಹಿಸಿದೆ. ಇದಕ್ಕಾಗಿಯೇ ಕಳೆದ ಕೆಲವು ವರ್ಷಗಳಿಂದ ಬೆಲೆ ಸ್ಥಿರೀಕರಣ ನಿಧಿಯಡಿ ₹28 ಸಾವಿರ ಕೋಟಿಯನ್ನು ಖರ್ಚು ಮಾಡಿದೆ ಎಂದು ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.