ನವದೆಹಲಿ: ಕೇಂದ್ರ ಸಚಿವ ರಾಜೀವ್ ರಂಜನ್ ಸಿಂಗ್ ಅವರು, ಏಪ್ರಿಲ್ 28ರಂದು ಕರಾವಳಿ ತೀರ ಪ್ರದೇಶ ಹೊಂದಿರುವ ಏಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಟ್ಟು ₹255.30 ಕೋಟಿ ಮೊತ್ತದ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಹಲವು ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ (ಪಿಎಂಎಂಎಸ್‌ವೈ) ಈ ಅನುದಾನ ನಿಗದಿಪಡಿಸಲಾಗಿದೆ. ಸಮುದ್ರ ಮೀನುಗಾರಿಕೆ ಮತ್ತು ಸುಸ್ಥಿರ ಮೀನುಗಾರಿಕೆಗೆ ಉತ್ತೇಜನ ನೀಡುವುದು ಇದರ ಗುರಿಯಾಗಿದೆ.
ಅದೇ ದಿನದಂದು ಮುಂಬೈನಲ್ಲಿ ಕರಾವಳಿ ತೀರ ಪ್ರದೇಶ ಹೊಂದಿರುವ ರಾಜ್ಯಗಳ ಸಭೆ ಕೂಡ ನಡೆಯಲಿದೆ. ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ಗೋವಾ, ಆಂಧ್ರಪ್ರದೇಶ, ಒಡಿಶಾ ಮತ್ತು ಪುದುಚೇರಿಯ ಮೀನುಗಾರಿಕೆ ಸಚಿವರು ಭಾಗವಹಿಸಲಿದ್ದಾರೆ.
ಮೀನುಗಾರಿಕೆ ರೈತ ಉತ್ಪಾದಕರ ಸಂಸ್ಥೆಗಳು, ಮೀನುಗಾರಿಕೆಗೆ ಸಂಬಂಧಿಸಿದ ನವೋದ್ಯಮಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಗುತ್ತದೆ. ಅಲ್ಲದೆ, ಪ್ರಧಾನ ಮಂತ್ರಿ ಮತ್ಸ್ಯ ಕಿಸಾನ್ ಸಮೃದ್ಧಿ ಸಹ ಯೋಜನೆಯಡಿ ಆಕ್ವಾ ವಿಮಾ ಪ್ರಮಾಣ ಪತ್ರ ಮತ್ತು ಕಿಸಾನ್ ಕ್ರೆಡಿಟ್ ಕಾರ್ಡ್‌ಗಳನ್ನು ವಿತರಣೆ ಮಾಡಲಾಗುತ್ತದೆ.
ಕರಾವಳಿ ಮತ್ತು ಇತರೆ ಒಳನಾಡು ಪ್ರದೇಶಗಳಲ್ಲಿ ಜಲಕೃಷಿ ಮಾಡುವ ರೈತರಿಗೆ ಆರ್ಥಿಕ ಭದ್ರತೆ ಒದಗಿಸಲು ಕೇಂದ್ರ ಸರ್ಕಾರವು, ಆಕ್ವಾ ವಿಮಾ ಯೋಜನೆಯನ್ನು ಜಾರಿಗೊಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.