ADVERTISEMENT

ಕೇಂದ್ರದ ಕ್ರಮದಿಂದಾಗಿ ಬೆಲೆ ಇಳಿಕೆ: ಫ್ರೀಡಂ ಹೆಲ್ತಿ ಕುಕಿಂಗ್ ಆಯಿಲ್ಸ್‌ ಕಂಪನಿ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2021, 15:56 IST
Last Updated 24 ಡಿಸೆಂಬರ್ 2021, 15:56 IST

ಬೆಂಗಳೂರು: ಕೇಂದ್ರ ಸರ್ಕಾರ ಕೈಗೊಂಡ ಕೆಲವು ಕ್ರಮಗಳಿಂದಾಗಿ ಸೂರ್ಯಕಾಂತಿ ಎಣ್ಣೆ ಬೆಲೆಯು, ಅದು ಈಚೆಗೆ ತಲುಪಿದ್ದ ಗರಿಷ್ಠ ಮಟ್ಟಕ್ಕೆ ಹೋಲಿಸಿದರೆ ಶೇಕಡ 20ರಷ್ಟು ಕಡಿಮೆ ಆಗಿದೆ ಎಂದು ಫ್ರೀಡಂ ಹೆಲ್ತಿ ಕುಕಿಂಗ್ ಆಯಿಲ್ಸ್‌ ಕಂಪನಿಯ ಮಾರಾಟ ಮತ್ತು ಮಾರುಕಟ್ಟೆ ವಿಭಾಗದ ಹಿರಿಯ ಉಪಾಧ್ಯಕ್ಷ ಪಿ. ಚಂದ್ರಶೇಖರ ರೆಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದೇಶದ ಮಾರುಕಟ್ಟೆಯಲ್ಲಿ ಬಿಕರಿಯಾಗುವ ಸೂರ್ಯಕಾಂತಿ ಎಣ್ಣೆಯಲ್ಲಿ ಶೇಕಡ 70ರಷ್ಟು ದಕ್ಷಿಣದ ರಾಜ್ಯಗಳಲ್ಲಿ ಮತ್ತು ಒಡಿಶಾದಲ್ಲಿ ಮಾರಾಟ ಆಗುತ್ತದೆ. ದೇಶಕ್ಕೆ ಉಕ್ರೈನ್ ಮತ್ತು ರಷ್ಯಾದಿಂದ ಹೆಚ್ಚಿನ ಪ್ರಮಾಣದಲ್ಲಿ ಕಚ್ಚಾ ಸೂರ್ಯಕಾಂತಿ ಎಣ್ಣೆ ಆಮದು ಮಾಡಿಕೊಳ್ಳಲಾಗುತ್ತದೆ.

‘ಈ ವರ್ಷದ ಆರಂಭದಲ್ಲಿ ಜಾಗತಿಕ ಕಾರಣಗಳಿಂದಾಗಿ ಸೂರ್ಯಕಾಂತಿ ಎಣ್ಣೆಗೆ ಗ್ರಾಹಕರು ಪಾವತಿಸಬೇಕಾದ ಬೆಲೆಯು ₹ 180ರವರೆಗೂ ಏರಿಕೆ ಆಗಿತ್ತು. ಆದರೆ, ಕೇಂದ್ರ ಸರ್ಕಾರವು ಆಮದು ಸುಂಕವನ್ನು ತಗ್ಗಿಸಿದ್ದರ ಪರಿಣಾಮವಾಗಿ ನಮಗೆ ಸೂರ್ಯಕಾಂತಿ ಎಣ್ಣೆಯ ಬೆಲೆಯನ್ನು ತಗ್ಗಿಸಲು ಸಾಧ್ಯವಾಯಿತು’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.