ADVERTISEMENT

ಏರ್ ಇಂಡಿಯಾದಲ್ಲಿ ಬದಲಾವಣೆ

ಪಿಟಿಐ
Published 15 ಏಪ್ರಿಲ್ 2022, 15:53 IST
Last Updated 15 ಏಪ್ರಿಲ್ 2022, 15:53 IST

ನವದೆಹಲಿ (ಪಿಟಿಐ): ಏರ್ ಇಂಡಿಯಾ ಕಂಪನಿಯ ಹಿರಿಯ ಅಧಿಕಾರಿಗಳ ಹುದ್ದೆಯಲ್ಲಿ ಬದಲಾವಣೆ ತರಲಾಗಿದೆ. ನಿಪುನ್ ಅಗರ್ವಾಲ್ ಅವರನ್ನು ಮುಖ್ಯ ವಾಣಿಜ್ಯ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. ಸುರೇಶ್ ದತ್ ತ್ರಿಪಾಠಿ ಅವರನ್ನು ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.

ಏರ್ ಇಂಡಿಯಾದ ಮಾಲೀಕತ್ವ ಹೊಂದಿರುವ ಟಾಟಾ ಸನ್ಸ್‌ ಅಧ್ಯಕ್ಷ ಎನ್. ಚಂದ್ರಶೇಖರನ್ ಅವರು ಈ ನೇಮಕಗಳ ಸಂಬಂಧ ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT