ADVERTISEMENT

ಕಾಫಿ ಡೇ | ಹಂಗಾಮಿ ಸಿಒಒ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 15 ಜುಲೈ 2020, 20:42 IST
Last Updated 15 ಜುಲೈ 2020, 20:42 IST
   

ನವದೆಹಲಿ: ಕಾಫಿ ಡೇ ಎಂಟರ್‌ಪ್ರೈಸಸ್‌ ಲಿಮಿಟೆಡ್‌ನ ಹಂಗಾಮಿ ಸಿಒಒ ನಿತಿನ್‌ ಬಾಗಮನೆ ಅವರು ವೈಯಕ್ತಿಕ ಕಾರಣ ನೀಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯು ಮಂಗಳವಾರದಿಂದಲೇ ಜಾರಿಗೆಬಂದಿದೆ.

ಪ್ರವರ್ತಕ ಸಿದ್ಧಾರ್ಥ ಅವರು ಆತ್ಮಹತ್ಯೆ ಮಾಡಿಕೊಂಡ ಬಳಿಕ ನಿತಿನ್‌ ಅವರನ್ನು ಸಿಒಒ ಮತ್ತು ಕಾರ್ಯನಿರ್ವಾಹಕ ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿತ್ತು. ಇನ್ನುಮುಂದೆ ಕಾರ್ಯನಿರ್ವಾಹಕ ಸಮಿತಿ ಸದಸ್ಯರಾಗಿ ಮಾತ್ರವೇ ಇರಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT