ADVERTISEMENT

ಮಾಳವಿಕಾ ಹೆಗ್ಡೆ ಕಾಫಿ ಡೇ ಎಂಟರ್‌ಪ್ರೈಸಸ್‌ನ ನೂತನ ಸಿಇಒ

ಪಿಟಿಐ
Published 8 ಡಿಸೆಂಬರ್ 2020, 2:20 IST
Last Updated 8 ಡಿಸೆಂಬರ್ 2020, 2:20 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಕಾಫಿ ಡೇ ಎಂಟರ್‌ಪ್ರೈಸಸ್ ಲಿಮಿಟೆಡ್‌ನ (ಸಿಡಿಇಎಲ್‌) ಸಂಸ್ಥಾಪಕ ವಿ.ಜಿ. ಸಿದ್ಧಾರ್ಥ ಅವರ ಪತ್ನಿ ಮಾಳವಿಕಾ ಹೆಗ್ಡೆ ಅವರನ್ನು ಕಂಪನಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಕಂಪನಿಯುತಿಳಿಸಿದೆ.

ದೇಶದಾದ್ಯಂತ ಇರುವ ಕೆಫೆ ಕಾಫಿ ಡೇ ರೆಸ್ಟಾರೆಂಟ್‌ಗಳ ಮಾಲೀಕತ್ವವು ಸಿಡಿಇಎಲ್‌ ಕೈಯಲ್ಲಿ ಇದೆ. ‘ಕಂಪನಿಯ ನಿರ್ದೇಶಕಿ ಆಗಿರುವ ಮಾಳವಿಕಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಿಇಒ ಆಗಿ ನೇಮಕ ಮಾಡಲಾಗಿದೆ’ ಎಂದು ಕಂಪನಿಯು ತಿಳಿಸಿದೆ.

ಕಾಫಿ ಡೇ ಗ್ಲೋಬಲ್‌ ಘಟಕದ ಸಂಸ್ಥಾಪಕ, ಉದ್ಯಮಿ ಸಿದ್ಧಾರ್ಥ ಅವರು ಕಳೆದ ವರ್ಷ ಜುಲೈ 31ರಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಬಳಿಕ ಕಾಫಿ ಡೇ ಗ್ಲೋಬಲ್‌ ಲಿಮಿಟೆಡ್‌ನ ಹಂಗಾಮಿ ಸಿಇಒ ಆಗಿ ರಂಗನಾಥ್ ಅವರನ್ನು ನೇಮಕ ಮಾಡಲಾಗಿತ್ತು.

ADVERTISEMENT

ಕಳೆದ ನವೆಂಬರ್‌ನಲ್ಲಿ ಕಾಫಿ ಖರೀದಿಸಿದ ಚೆಕ್‌ ಅಮಾನ್ಯ (ಬೌನ್ಸ್‌) ಪ್ರಕರಣದಲ್ಲಿ ಮೂಡಿಗೆರೆ ಜೆಎಂಎಫ್‌ಸಿ ನ್ಯಾಯಾಲಯ ಮಾಳವಿಕಾ ಹೆಗ್ಡೆ ಬಂಧನಕ್ಕೆ ಜಾಮೀನುರಹಿತ ವಾರಂಟ್‌ ಹೊರಡಿಸಿತ್ತು. ಬಳಿಕ ಅವರು ಜಾಮೀನು ಪಡೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.