ADVERTISEMENT

ದಾವೋಸ್‌ ಸಭೆ: ಭಾರತದ ನಿಯೋಗಕ್ಕೆ ಗೋಯಲ್‌ ನೇತೃತ್ವ

ಪಿಟಿಐ
Published 18 ಜನವರಿ 2020, 19:45 IST
Last Updated 18 ಜನವರಿ 2020, 19:45 IST
ಪೀಯೂಷ್‌ ಗೋಯಲ್‌
ಪೀಯೂಷ್‌ ಗೋಯಲ್‌   

ನವದೆಹಲಿ: ದಾವೋಸ್‌ನಲ್ಲಿ ಇದೇ 20ರಿಂದ ನಡೆಯಲಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಭಾಗವಹಿಸಲಿರುವ ಭಾರತದ ನಿಯೋಗದ ನೇತೃತ್ವವನ್ನು ಕೇಂದ್ರ ವಾಣಿಜ್ಯ ಸಚಿವ ಪೀಯೂಷ್‌ ಗೋಯಲ್‌ ಅವರು ವಹಿಸಲಿದ್ದಾರೆ.

ಭಾರತೀಯ ರೈಲ್ವೆಯಲ್ಲಿ ಹೂಡಿಕೆ ಹೆಚ್ಚಿಸುವುದು ಹಾಗೂ ಜಾಗತಿಕ ಸಾಂಸ್ಥಿಕ ಹೂಡಿಕೆದಾರರನ್ನು ಭಾರತಕ್ಕೆ ಆಕರ್ಷಿಸುವ ವಿಷಯಗಳ ಕುರಿತ ವಿಚಾರಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ ಎಂದು ವಾಣಿಜ್ಯ ಸಚಿವಾಲಯದ ಪ್ರಕಟಣೆಯ ತಿಳಿಸಿದೆ.

ಇದೇ ಸಂದರ್ಭದಲ್ಲಿ ನಡೆಯಲಿರುವ ವಿಶ್ವ ವಾಣಿಜ್ಯ ಸಂಘಟನೆಯ ಸಚಿವರ ಅನೌಪಚಾರಿಕ ಸಭೆಯಲ್ಲಿಯೂ ಅವರು ಭಾಗವಹಿಸಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.